– ಪಶ್ಚಿಮ ಬಂಗಾಳದ ವ್ಯಕ್ತಿ ಬೆಂಗಳೂರಿನಲ್ಲಿ ಆತ್ಮಹತ್ಯೆ
ಬೆಂಗಳೂರು: ಗರ್ಲ್ ಫ್ರೆಂಡ್ ಮಾತನಾಡ್ತಿಲ್ಲ ಅಂತ 41 ವರ್ಷದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಯಾಲಿಕಾವಲ್ ಪ್ಯಾಲೇಸ್ ಗುಟ್ಟಹಳಿಯಲ್ಲಿ ನಡೆದಿದೆ.
ಡಾರ್ಜಿಲಿಂಗ್ ಮೂಲದ ಸುದೀಪ್ (41) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಜನನಿಬಿಡ ಪ್ರದೇಶದಲ್ಲೇ ದೇವಸ್ಥಾನದ ಎದುರಿನ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸೂಟ್‌ಕೇಸಲ್ಲಿ ನಗದು ಹಣ ಇಟ್ಟು ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾನೆ. ಇನ್ನೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ವೈಯಾಲಿಕಾವಲ್ ಪೊಲೀಸರು, ಮೃತದೇಹವನ್ನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಮೇಲ್ನೋಟಕ್ಕೆ ಸುದೀಪ್ ತನ್ನ ಗರ್ಲ್‌ಫ್ರೆಂಡ್ ಮಾತನಾಡ್ತಿಲ್ಲ ಅನ್ನೋ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದುಬಂದಿದೆ. ಈ ಸಂಬಂಧ ತನಿಖೆ ಮುಂದುವರಿದಿದೆ.
