– ಮೊಬೈಲ್ ರೀಲ್ಸ್‌ನಲ್ಲಿ ಸದಾ ಬ್ಯುಸಿ ಇದ್ದಳೆಂದು ಕೊಲೆ?
ಉಡುಪಿ: ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿ ಪತಿಯೇ ಪತ್ನಿಯನ್ನು ಹತ್ಯೆಗೈದ ಘಟನೆ ಉಡುಪಿಯಲ್ಲಿ (Udupi) ನಡೆದಿದೆ.
ಪೊಲೀಸರ ಮೇಲ್ನೋಟದ ತನಿಖೆಯಲ್ಲಿ ಪತ್ನಿ ಮೊಬೈಲ್‌ನಲ್ಲಿ ಯಾವಾಗಲೂ ಬ್ಯುಸಿಯಾಗಿದ್ದಳು ಎಂಬ ಕಾರಣಕ್ಕೆ ಆಗಾಗ ಜಗಳವಾಗುತ್ತಿತ್ತು. ಇದೇ ಕಾರಣಕ್ಕೆ ಚಾಕುವಿನಿಂದ ಹಲ್ಲೆ ಮಾಡಿ ಕೊಲೆಗೈಯ್ಯಲಾಗಿದೆ ಎಂಬ ಮಾಹಿತಿಯಿದೆ. ಇದನ್ನೂ ಓದಿ: ಸಂಬಂಧಿಕನಿಂದಲೇ 10ರ ಬಾಲಕಿ ಮೇಲೆ ಅತ್ಯಾಚಾರ – ಅರೆಬೆತ್ತಲೆ ಸ್ಥಿತಿಯಲ್ಲಿ ಶವ ಪತ್ತೆ; ಕಾಮುಕ ಅರೆಸ್ಟ್
ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮದ ಕಾರ್ಕಡ ಹೆದ್ದಾರಿ ಅಂಗನವಾಡಿ ಕೇಂದ್ರದ ಸಮೀಪದಲ್ಲಿ ಕಿರಣ್ ಮತ್ತು ಜಯಶ್ರೀ ದಂಪತಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಬೀದರ್ ಮೂಲದ ಜಯಶ್ರೀ ಜೊತೆ 8 ತಿಂಗ ಹಿಂದೆ ಕಿರಣ್ ಮದುವೆಯಾಗಿತ್ತು. ಕಿರಣ್ ಸಾಲಿಗ್ರಾಮದ ಗುರು ನರಸಿಂಹ ದೇವಸ್ಥಾನದಲ್ಲಿ ಎರಡು ವರ್ಷದಿಂದ ಅಡುಗೆ ಕೆಲಸ ಮಾಡುತ್ತಿದ್ದ. ಮನೆಯ ಟೆರೇಸ್‌ನಿಂದ ಬಿದ್ದು ಗಾಯಗೊಂಡಿರುವುದಾಗಿ ಪತಿ ಕಿರಣ್ ಗಾಯಾಳು ಪತ್ನಿಯನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಉಡುಪಿಯ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ಆಕೆ ಮೃತರಾಗಿರುವುದು ಬೆಳಕಿಗೆ ಬಂದಿದೆ.
ಜಯಶ್ರೀ ಕುಟುಂಬಸ್ಥರ ಆಗಮನಕ್ಕಾಗಿ ಪೊಲೀಸರು ಕಾಯುತ್ತಿದ್ದಾರೆ. ಜಯಶ್ರೀ ಸದಾ ಮೊಬೈಲ್‌ನಲ್ಲಿ, ರೀಲ್ಸ್‌ನಲ್ಲಿ ಬ್ಯುಸಿ ಇರುತ್ತಿದ್ದ ಬಗ್ಗೆ ಪತಿ ಕಿರಣ್ ದೂರುತ್ತಿದ್ದ. ಇಂದು ಬೆಳಗ್ಗೆ ಇದೇ ಕಾರಣಕ್ಕೆ ಜಗಳ ನಡೆದು ಪತಿ ಚಾಕುವಿನಿಂದ ಹಲ್ಲೆ ನಡೆಸಿರುವ ಸಾಧ್ಯತೆಯಿದೆ. ಬೀದರ್ ದೊಣಗಪುರದಿಂದ ಕುಟುಂಬಸ್ಥರು ಉಡುಪಿಗೆ ಬರುತ್ತಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಕಲಿ ಎನ್‍ಸಿಸಿ ಶಿಬಿರದಲ್ಲಿ ಲೈಂಗಿಕ ದೌರ್ಜನ್ಯ ಕೇಸ್ – ಪ್ರಕರಣದ ಪ್ರಮುಖ ಆರೋಪಿ ಆತ್ಮಹತ್ಯೆಗೆ ಶರಣು