ಶಿವಮೊಗ್ಗ: ಅನೈತಿಕ ಸಂಬಂಧ ಶಂಕಿಸಿ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಮೇಲೆ ಸಿಲಿಂಡರ್ ಎತ್ತಿಹಾಕಿ ಕೊಲೆಗೈದ ಘಟನೆ ನಗರದ ಬೊಮ್ಮನಕಟ್ಟೆ ಸಿ ಬ್ಲಾಕ್‍ನಲ್ಲಿ ನಡೆದಿದೆ.
ನಗರದ ಚಾಮುಂಡೇಶ್ವರಿ ದೇವಸ್ಥಾನದ ಹಿಂಭಾಗದ ಬಡಾವಣೆಯ ನಿವಾಸಿ ಮಾಲಾ ಕೊಲೆಯಾದ ದುರ್ದೈವಿ. ಮಂಜುನಾಥ್ ಕೊಲೆಗೈದ ಪತಿ. ಮಂಜುನಾಥ್ ಹಾಗೂ ಮಾಲಾ ಇಬ್ಬರೂ ತರೀಕೆರೆ ತಾಲೂಕು ಹಾಲಲಕ್ಕವಳ್ಳಿ ಗ್ರಾಮದ ನಿವಾಸಿಗಳು. ಇಬ್ಬರು ಪರಸ್ಪರ ಪ್ರೀತಿಸಿ ಎಂಟು ವರ್ಷದ ಹಿಂದೆ ಮದುವೆಯಾಗಿದ್ದರು.
ಮದುವೆಯಾದ ಬಳಿಕ ಮಂಜುನಾಥ್ ಪತ್ನಿಯನ್ನು ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ. ಇದರಿಂದಾಗಿ ಮಾಲಾ ಶಿವಮೊಗ್ಗದಲ್ಲಿ ಪ್ರತ್ಯೇಕ ಮನೆ ಮಾಡಿಕೊಂಡು ವಾಸವಾಗಿದ್ದರು. ಪತ್ನಿಯ ನಿರ್ಧಾರಕ್ಕೆ ಮಂಜುನಾಥ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದನು. ಪತ್ನಿ ಮನೆಗೆ ಶುಕ್ರವಾರ ರಾತ್ರಿ ಬಂದು ಊಟ ಮಾಡಿ, ನಂತರ ಗಲಾಟೆ ಮಾಡಿಕೊಂಡು ಮಲಗಿದ್ದ. ಆದರೆ ರಾತ್ರಿ ಕೊಲೆಗೆ ಯತ್ನಿಸಿದ್ದ ಮಂಜುನಾತ್, ಬೆಳಗ್ಗೆ ಮಲಗಿದ್ದ ಮಾಲಾಳ ಮೇಲೆ ಗ್ಯಾಸ್ ಸಿಲಿಂಡರ್ ಎತ್ತಿಹಾಕಿ ಕೊಲೆಗೈದಿದ್ದಾನೆ. ಬಳಿಕ ವಿನೋಬಾ ನಗರ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.
ಈ ಕುರಿತು ಮಾಹಿತಿ ಪಡೆದ ಪೊಲೀಸರು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews