ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಫ್ರಾನ್ಸ್‌ಗೆ (France) ತೆರಳುತ್ತಿದ್ದಾಗ (ಫೆ.11) ವಿಮಾನದ ಮೇಲೆ ಭಯೋತ್ಪಾದಕರು ದಾಳಿ ನಡೆಸಬಹುದು ಎಂದು ಅಪರಿಚಿತರೊಬ್ಬರು ಮುಂಬೈ ಪೊಲೀಸ್ ಕಂಟ್ರೋಲ್ ರೂಮ್‌ಗೆ ಕರೆ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ. ಜೊತೆಗೆ, ಇತರ ಏಜೆನ್ಸಿಗಳಿಗೂ ಈ ಕುರಿತು ಮಾಹಿತಿ ನೀಡಲಾಗಿದೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.
Advertisement
Advertisement
ನರೇಂದ್ರ ಮೋದಿ ಅವರು ಮೂರು ದಿನಗಳ ಕಾಲ ಫ್ರಾನ್ಸ್ ಹಾಗೂ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಮೋದಿ ಅವರನ್ನು ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯೆಲ್ ಮ್ಯಾಕ್ರನ್ ಮಂಗಳವಾರ ಆತ್ಮೀಯವಾಗಿ ಬರಮಾಡಿಕೊಂಡಿದ್ದರು. ಇದನ್ನೂ ಓದಿ: ಫ್ರಾನ್ಸ್‌ಗೆ ಪ್ರಯಾಣ ಬೆಳೆಸಿದ ಮೋದಿ – ಅಮೆರಿಕ ಭೇಟಿ ಬಗ್ಗೆ ಹೇಳಿದ್ದೇನು?
Advertisement
Advertisement
ಪ್ಯಾರಿಸ್‌ನಲ್ಲಿ ಮಂಗಳವಾರ ನಡೆದ ‘ಎಐ ಆ್ಯಕ್ಷನ್’ ಶೃಂಗಸಭೆಯಲ್ಲಿ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಎಮಾನ್ಯುಯೆಲ್ ಮ್ಯಾಕ್ರನ್ ಅವರೊಂದಿಗೆ ಸಹ ಅಧ್ಯಕ್ಷತೆ ವಹಿಸಿದ್ದರು. ಇದನ್ನೂ ಓದಿ: ವಿದೇಶಗಳಿಗೆ ಅಮೆರಿಕ ನೀಡುತ್ತಿದ್ದ ನೆರವಿಗೂ ಕೊಕ್ಕೆ ಹಾಕಿದ ಟ್ರಂಪ್ – ಭಾರತದ ಮೇಲೂ ಎಫೆಕ್ಟ್?