ಧಾರವಾಡ: ತನ್ನ ಹೆಂಡತಿ ಸಹಾಯದಿಂದಲೇ ಪಕ್ಕದ ಮನೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಧಾರವಾಡ ತಾಲೂಕಿನ ಅಮ್ಮಿನ ಬಾವಿ ಗ್ರಾಮದಲ್ಲಿ ನಡೆದಿದೆ.
ಕಾಮುಕ ಮೈಲಾರಪ್ಪ ಚಿಕ್ಕುಂಬಿ ಅದೇ ಗ್ರಾಮದ ತನ್ನ ಪಕ್ಕದ ಮನೆಯ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಕೃತ್ಯಕ್ಕೆ ಅವನ ಹೆಂಡತಿ ಲಕ್ಷ್ಮೀ ಕೂಡ ಸಹಾಯ ಮಾಡಿದ್ದಾಳೆ ಎಂದು ಆರೋಪಿಸಿ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ (Dharwad Rural Police) ಪೋಕ್ಸೊ ಕಾಯ್ದೆಯಡಿ (POCSO Act) ಕೇಸ್ ದಾಖಲಾಗಿದೆ. ಇದನ್ನೂ ಓದಿ: ಸಾಹಿತ್ಯ ಸಮ್ಮೇಳನ ವಿರೋಧಿಸಿ ಬೆಂಗಳೂರಲ್ಲಿ ಜನಸಾಹಿತ್ಯ ಸಮ್ಮೇಳನ: ಪ್ರೊ.ಪುರುಷೋತ್ತಮ್ ಬಿಳಿಮಲೆ
Advertisement
Advertisement
ಮೈಲಾರಪ್ಪ ಚಿಕ್ಕುಂಬಿ ತನ್ನ ಪಕ್ಕದ ಮನೆಯಲ್ಲಿದ್ದ 17ರ ಬಾಲಕಿ ಮೇಲೆ ಲೈಂಗಿಕ ತೃಷೆ ತೀರಿಸಿಕೊಳ್ಳಲು ತನ್ನ ಮನೆಗೆ ಕರೆದುಕೊಂಡು ಬರುವಂತೆ ಪತ್ನಿ ಲಕ್ಷ್ಮೀಗೆ ಹೇಳಿದ್ದಾನೆ. ನಂತರ ಲಕ್ಷ್ಮೀ ಆ ಬಾಲಕಿಯನ್ನ ಪುಸಲಾಯಿಸಿ ತನ್ನ ಮನೆಗೆ ಕರೆದುಕೊಂಡು ಬಂದು ಲೈಂಗಿಕ ದೌರ್ಜನ್ಯ ಎಸಗಲು ಸಹಾಯ ಮಾಡಿದ್ದಾಳೆ. ಇದನ್ನೂ ಓದಿ: ಶೀಘ್ರವೇ ಸಂಪುಟ ವಿಸ್ತರಣೆ – ಈಶ್ವರಪ್ಪ, ರಮೇಶ್ ಜಾರಕಿಹೊಳಿ ಸಚಿವ ಸ್ಥಾನದ ಬಗ್ಗೆ ಸಿಎಂ ಸ್ಪಷ್ಟನೆ
Advertisement
Advertisement
ಈ ವಿಷಯ ತಿಳಿದ ಸಂತ್ರಸ್ತ ಬಾಲಕಿಯ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಂತ್ರಸ್ತೆ ಹೇಳಿಕೆ ಆಧರಿಸಿ ಆರೋಪಿಗಳ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಲಾಗಿದೆ. ಸದ್ಯ ಪತಿ-ಪತ್ನಿ ಇಬ್ಬರೂ ಪರಾರಿಯಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k