ಕಲಬುರಗಿ: ಬೆತ್ತಲೆ ಮಾಡಿ ಕಟ್ಟಿಗೆಯಿಂದ ಹೊಡೆದು ವ್ಯಕ್ತಿಯನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ (Kalaburagi) ನಗರದ ಕುಷ್ಟರೋಗಿಗಳ ಕಾಲೋನಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಚಾಂದ್‌ಸಾಬ್ ಕೊಲೆಯಾದ ದುರ್ದೈವಿ. ಶುಕ್ರವಾರ ರಾತ್ರಿ ಚಾಂದ್‌ಸಾಬ್ ಮನೆಯಲ್ಲೇ ಪರಿಚಿತರೊಂದಿಗೆ ಎಣ್ಣೆ ಪಾರ್ಟಿ ನಡೆಸಿದ್ದರು. ಈ ವೇಳೆ ಗಲಾಟೆ ನಡೆದು ಚಾಂದ್‌ಸಾಬ್‌ನನ್ನು ಬೆತ್ತಲೆ ಮಾಡಿ ಕಟ್ಟಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇದನ್ನೂ ಓದಿ: ಮಾತು ಬಾರದ ಮಹಿಳೆ ಬಾಯಿಗೆ ಬಟ್ಟೆ ತುರುಕಿ ವಿಕೃತಿ – ಆರೋಪಿ ಅರೆಸ್ಟ್
ಮೃತರ ಪತ್ನಿ ದೆಹಲಿಯಲ್ಲಿ ವಾಸವಿದ್ದು, ಪತಿಯ ಸಾವಿನ ಬಗ್ಗೆ ತಿಳಿದು ಕಲಬುರಗಿಯತ್ತ ಆಗಮಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರಾಘವೇಂದ್ರ ನಗರ ಪೊಲೀಸ್ (Raghavendra Town Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.