ಬೆಂಗಳೂರು | ಲೇಡಿಸ್ ಪಿಜಿಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕ ಅರೆಸ್ಟ್

Public TV
1 Min Read
Bengaluru Sadduguntepalya Arrest

ಬೆಂಗಳೂರು: ಲೇಡಿಸ್ ಪಿ.ಜಿಗೆ ನುಗ್ಗಿ ಯುವತಿಯ ಮೈ ಕೈ ಮುಟ್ಟಿ ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ತಲೆಮರಿಸಿಕೊಂಡಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶದ (Andhra Pradesh) ಮದನ್‌ಪಲ್ಲಿ (Madanapalle) ಮೂಲದ ಕೆ.ನರೇಶ್ ಪಟ್ಯಂ ಬಂಧಿತ ಆರೋಪಿಯಾಗಿದ್ದು, ಬೆಂಗಳೂರಿನಲ್ಲಿ (Bengaluru) ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ.ಇದನ್ನೂ ಓದಿ: ಬೆಂಗಳೂರು | ಲೇಡಿಸ್ ಪಿಜಿಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ

ಆ.29ರಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಪಿ.ಜಿಗೆ ನುಗ್ಗಿದ್ದ ಅಪರಿಚಿತ ವ್ಯಕ್ತಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಅಲ್ಲದೇ ಯುವತಿಯನ್ನ ಎಳೆದಾಡಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ.

ಸದ್ದುಗುಂಟೆಪಾಳ್ಯ (Sadduguntepalya) ಠಾಣಾ ವ್ಯಾಪ್ತಿಯ ಪಿಜಿಯಲ್ಲಿ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಸಾಮಿಯು ಯುವತಿಯ ರೂಮ್‌ಗೆ ನುಗ್ಗಿದಾಗ ಆಕೆ ರೂಮ್‌ಮೇಟ್ ಇರಬಹುದು ಅಂದುಕೊಂಡಿದ್ದಳು. ಕಾಮುಕ ಮೊದಲೇ ಪಿಜಿ ಫ್ಲೋರ್‌ನ ಎಲ್ಲಾ ರೂಮ್ ಡೋರ್‌ಗಳನ್ನು ಲಾಕ್ ಮಾಡಿ, ಬಳಿಕ ಯುವತಿ ಬಳಿ ಹೋಗಿ ಆಕೆಯ ಕೈ ಕಾಲು ಮುಟ್ಟಿದ್ದ. ಯುವತಿಗೆ ಎಚ್ಚರವಾಗಿ ಗಾಬರಿಯಿಂದ ಕಿರುಚಿದಾಗ ಚಾಕು ತೋರಿಸಿ ಬೆದರಿಕೆ ಹಾಕಿದ್ದ. ಈ ವೇಳೆ ಪ್ರತಿರೋಧ ಒಡ್ಡಿ, ಕೂಗಾಡಿ ಹೊರಬಂದಿದ್ದ ಯುವತಿಯ ಕಪಾಳಕ್ಕೆ ಹೊಡೆದು, ಆಕೆಯನ್ನು ಎಳೆದಾಡಿ ಕಾಮುಕ ಎಸ್ಕೇಪ್ ಆಗಿದ್ದ.

ಸದ್ಯ ಸದ್ದುಗುಂಟೆಪಾಳ್ಯ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಇದನ್ನೂ ಓದಿ: Bengaluru | ಲೇಡಿಸ್ ಪಿಜಿಗೆ ನುಗ್ಗಿ ಎಂಜಿನಿಯರ್ ಕುತ್ತಿಗೆಗೆ ಚಾಕು ಇಟ್ಟು ಚಿನ್ನಾಭರಣ ದರೋಡೆ

Share This Article