ಹಾವೇರಿ: ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದಲ್ಲಿ ಆಂಜನೇಯ ದೇವಸ್ಥಾನದ ಗೋಡೆಗೆ ಮೂತ್ರ ವಿಸರ್ಜನೆ ಮಾಡಿ ಅಪವಿತ್ರಗೊಳಿಸಿದ ವ್ಯಕ್ತಿಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರೋಪಿಯನ್ನು 32 ವರ್ಷದ ಜಾಫರ್ ಕನ್ಯಾನವರ ಎಂದು ಗುರುತಿಸಲಾಗಿದೆ. ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ಜಾಫರ್‌ನ ಕೃತ್ಯ ಸೆರೆಯಾಗಿದೆ. ದೇವಸ್ಥಾನದ ಆವರಣದಲ್ಲಿ ಮಲಗಿ, ಎದ್ದು ದೇವಸ್ಥಾನದ ಗೋಡೆಗೆ ಮೂತ್ರ ವಿಸರ್ಜನೆ ಮಾಡಿ ದೇವಸ್ಥಾನ ಅಪವಿತ್ರಗೊಳಿಸಿದ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ: ಸಿಎಂ ಜೊತೆ ಚರ್ಚಿಸುವೆ ಎಂದ ಸುಧಾಕರ್
ಇದೀಗ ಆರೋಪಿ ಜಾಫರ್ ವಿರುದ್ಧ ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಟ್ಯಾಕ್ಸ್ ಕಟ್ಟುವುದರಲ್ಲೂ ಅಕ್ಷಯ್ ಕುಮಾರ್ ಮುಂದು: ಆದಾಯ ತೆರಿಗೆ ಇಲಾಖೆಯಿಂದ ಮೆಚ್ಚುಗೆ ಪತ್ರ