ರಾಯಚೂರು: ಸ್ನೇಹಿತರೊಂದಿಗೆ ಪಾರ್ಟಿ ಮಾಡಲು ಹೋಗಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರಿನ (Lingasuguru) ಐದನಾಳ (Aidanhal) ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು 21 ವರ್ಷದ ಗಣೇಶ್ ಎಂದು ಗುರುತಿಸಲಾಗಿದ್ದು, ನಿಂಗಪ್ಪ, ರಮೇಶ್ ಎಂಬುವವರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಕಿಲಾಡಿ ಲೇಡಿಯಿಂದ ಕಂಟ್ರಾಕ್ಟರ್ ಸುಲಿಗೆ – ಟೀ ಕುಡಿಯಲು ಕರೆದು ದರೋಡೆ ಮಾಡಿಸಿದ ಸುಂದರಿ..!
Advertisement
Advertisement
ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದ ಯುವಕ ಮದ್ಯಪಾನ ಮಾಡಿದ್ದ. ಕುಡಿದ ಅಮಲಿನಲ್ಲಿ ಬಾವಿಯ ಬಳಿ ತೆರಳಿದಾಗ ಕಾಲು ಜಾರಿ ಬಾವಿಗೆ ಬಿದ್ದು, ಸಾವನ್ನಪ್ಪಿರುವುದಾಗಿ ಸ್ನೇಹಿತರು ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಮೃತನ ಕುಟುಂಬಸ್ಥರಿಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಕೊಲೆ ಪ್ರಕರಣ ದಾಖಲಿಸಿದ್ದಾರೆ. ಕೊಲೆ ಮಾಡುವ ಉದ್ದೇಶದಿಂದಲೇ ಪಾರ್ಟಿ ಮಾಡಲು ಕರೆದೊಯ್ದ ಬಾವಿಗೆ ತಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.
Advertisement
ಮೃತ ಗಣೇಶನ ತಂದೆ ಠಾಣೆಯಲ್ಲಿ ದೂರು ನೀಡಿದ್ದು, ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಿಂಗಸುಗೂರು ತಾಲೂಕಾಸ್ಪತ್ರೆ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ತನಿಖೆ ಆರಂಭವಾಗಿದೆ.ಇದನ್ನೂ ಓದಿ: ಮಧ್ಯಪ್ರದೇಶದ ಕುನೋ ಪಾರ್ಕ್‌ನ ಚಿರತೆ ಶಿಯೋಪುರ್ ರಸ್ತೆಯಲ್ಲಿ ಪತ್ತೆ – ನಿವಾಸಿಗಳಲ್ಲಿ ಆತಂಕ