– ಕೈ ತೊರೆಯಲಿದ್ದಾರೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ
ಹಾಸನ: ಲೋಕಸಭಾ ಚುನಾವಣೆಯ ಹಿನ್ನೆಲೆಯಿಂದಾಗಿ ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆಗಳಾಗುತ್ತಿದ್ದು, ಇಂದು ಮಾಜಿ ಸಚಿವ ಎ.ಮಂಜು ಕಾಂಗ್ರೆಸ್‍ಗೆ ಗುಡ್‍ಬೈ ಹೇಳಲಿದ್ದಾರೆ.
ಶುಕ್ರವಾರ ಹಾಸನದ ಅರಸೀಕೆರೆ ಯಲ್ಲಿ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಈ ಬಗ್ಗೆ ಎ.ಮಂಜು ಅವರು ಘೋಷಿಸಿದ್ದಾರೆ. ಮಂಜು ಜೊತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತಾ ದೇವರಾಜ್ ಕೂಡ ಕಾಂಗ್ರೆಸ್ಸಿಗೆ ಗುಡ್‍ಬೈ ಹೇಳುವ ಸಾಧ್ಯತೆಯಿದೆ. ಹಾಗೆಯೇ ಕಾಂಗ್ರೆಸ್‍ನಿಂದ ಬಿಜೆಪಿಗೆ ಎ. ಮಂಜು ಜಿಗಿಯಲಿದ್ದಾರೆ. ಮಂಜು ಜೊತೆಗೆ ಕಾಂಗ್ರೆಸ್‍ನ ಬಹುತೇಕ ಜನಪ್ರತಿನಿಧಿಗಳು ಸಹ ಕಾಂಗ್ರೆಸ್ ಬಿಡಲು ಪ್ಲಾನ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Advertisement
Advertisement
ಬಿಜೆಪಿಗೆ ಸೇರಿ ಹಾಸನದಲ್ಲಿ ಕಾಂಗ್ರೆಸ್‍ಗೆ ಬಿಗ್ ಶಾಕ್ ನೀಡಲು ಎ.ಮಂಜು ಸಿದ್ಧರಾಗಿದ್ದಾರೆ. ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಎ.ಮಂಜು ಸ್ಪರ್ಧಿಸುವ ಸಾಧ್ಯತೆ ಇದ್ದು, ಮಂಜು ತನ್ನ ಜೊತೆ ನೂರಾರು ಪ್ರಮುಖ ಜಿಲ್ಲಾ ನಾಯಕರನ್ನ ಬಿಜೆಪಿಗೆ ಕರೆದುಕೊಂಡು ಹೋಗ್ತಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.
Advertisement
Advertisement
ಸದ್ಯ ಎ.ಮಂಜು ಜೊತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತ ದೇವರಾಜ್ ಕೂಡ ಕಾಂಗ್ರೆಸ್ ತೊರೆಯಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv