– ಎಸ್ಕೇಪ್ ಆದ ಮಹಿಳೆಗೆ ಈ ಹಿಂದೆಯೇ ಆಗಿತ್ತು 2 ಮದುವೆ!
ಬಾಗಲಕೋಟೆ: ಹೆಣ್ಣು ಸಿಗಲಿಲ್ಲ ಎಂಬ ಕೊರಗಿನಲ್ಲಿದ್ದ ವ್ಯಕ್ತಿಗೆ ಮದುವೆ ಮಾಡಿಸಿ ಲಕ್ಷಾಂತರ ಹಣ ಪಡೆದು ಬ್ರೋಕರ್ ವಂಚಿಸಿರುವ ಘಟನೆ ನಡೆದಿದೆ. ಮದುವೆ ಬಳಿಕ ಬ್ರೋಕರ್ ಮತ್ತು ವಿವಾಹವಾದ ಹೆಣ್ಣು ಇಬ್ಬರೂ ಪರಾರಿಯಾಗಿದ್ದಾರೆ.
Advertisement
ಮುಧೋಳದ ಸೋಮಶೇಖರ್ ಎಂಬಾತ ಮೋಸ ಹೋಗಿದ್ದಾರೆ. ತನಗಾದ ವಂಚನೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಶಿವಮೊಗ್ಗದ ಮಂಜುಳಾ ಎಂಬಾಕೆಯನ್ನು ಮದುವೆ ಮಾಡಿ ಮೋಸ ಮಾಡಿದ್ದಾರೆಂದು ದೂರಿದ್ದಾರೆ. ಇದನ್ನೂ ಓದಿ: ಪ್ರೀತಿಸಿದ ಯುವತಿ-ಕುಟುಂಬಸ್ಥರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ, ರೈಲಿಗೆ ತಲೆಕೊಟ್ಟು ಭಗ್ನ ಪ್ರೇಮಿ ಆತ್ಮಹತ್ಯೆ
Advertisement
Advertisement
ಈಗಾಗಲೇ ಎರಡು ಮದುವೆಯಾಗಿದ್ದ ಶಿವಮೊಗ್ಗದ ಮಹಿಳೆ ಮಂಜುಳಾನ್ನ ಕರೆತಂದು ಬ್ರೋಕರ್ ಟೀಂ ಮದುವೆ ಮಾಡಿಸಿತ್ತು. ಇತ್ತ ಹೆಣ್ಣಿಗಾಗಿ ಅಲೆದಾಡುತ್ತಿದ್ದ ಸೋಮಶೇಖರನನ್ನ ಟಾರ್ಗೆಟ್ ಮಾಡಿದ್ದರು. ಹೆಣ್ಣು ಕೊಡಿಸ್ತೀವಿ ಅಂತ ಹೇಳಿ 4 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಹೆಣ್ಣು ಸಿಗದೇ ಕೊನೆಗೆ ಸೋಮಶೇಖರ್ ಮದುವೆಗೆ ಒಪ್ಪಿಕೊಂಡಿದ್ದ.
Advertisement
ಬಾಗಲಕೋಟೆ ಮುಧೋಳದ ಕಾಳಿಕಾದೇವಿ ದೇಗುಲದಲ್ಲಿ ವರ್ಷದ ಹಿಂದೆ ಮದುವೆ ನಡೆದಿತ್ತು. ಮದುವೆ ದಿನವೇ ಬ್ರೋಕರ್ ತಂಡವು ಪೂರ್ಣ 4 ಲಕ್ಷ ಹಣ ಪಡೆದಿತ್ತು. ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಮಂಜುಳಾ ಎಸ್ಕೇಪ್ ಆಗಿದ್ದಳು. ಪತ್ನಿ ಬಗ್ಗೆ ವಿಚಾರಿಸಲು ಹೋದ ವೇಳೆ ಈಗಾಗಲೇ ಆಕೆಗೆ ಎರಡು ಮದುವೆಯಾದ ಬಗ್ಗೆ ಸುಳಿವು ಸಿಕ್ಕಿದೆ. ಹಣ ಹೊಡೆಯಲು ಮದುವೆಯಾದ ಮಹಿಳೆಯನ್ನೇ ಶಿವಮೊಗ್ಗದಿಂದ ಮುಧೋಳಕ್ಕೆ ಬ್ರೋಕರ್ ಟೀಂ ಕರೆ ತಂದಿತ್ತು. ಬ್ರೋಕರ್ ಟೀಮ್‌ಗೆ ತಾನು ನೀಡಿದ 4 ಲಕ್ಷ ಹಣ ಮರಳಿಸುವಂತೆ ಸಂತ್ರಸ್ತ ಸೋಮಶೇಖರ್, ಪೊಲೀಸರ ಬಳಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ತಂದೆಯನ್ನೇ ಹತ್ಯೆಗೈದು ಹೃದಯಾಘಾತದ ಕತೆಕಟ್ಟಿದ್ದ ಮಗ ಅರೆಸ್ಟ್
ಕೊನೆಗೆ ಹಣ ಬಾರದೇ ಇದ್ದಾಗ ಮುಧೋಳ ಪೊಲೀಸ್ ಠಾಣೆಯಲ್ಲಿ 7 ಜನರ ವಿರುದ್ಧ ದೂರು ದಾಖಲಿಸಿದ್ದಾರೆ. ಆರೋಪಿ ಸತ್ಯಪ್ಪ ಮತ್ತು ಮಂಜುಳಾ ಸೇರಿ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಮುಧೋಳ ಠಾಣೆ ಪೋಲಿಸರು ಮುಂದಾಗಿದ್ದಾರೆ.
ಮದುವೆ ಮಾಡಿಸಿ ಹಣ ಹೊಡೆಯಲು ಇದೊಂದು ದೊಡ್ಡ ಜಾಲವೇ ಇದೆ. ಈ ಗ್ಯಾಂಗ್ ಎಲ್ಲಿ ಕಾರ್ಯಪ್ರವೃತ್ತಿಯಾಗಿದೆ ಅಂತ ಹುಡುಕಿ ತನಿಖೆ ಮಾಡುತ್ತಿದ್ದೇವೆ. ಈ ಜಾಲದಲ್ಲಿ ಆರೋಪಿಗಳು ಬೆಳಗಾವಿ, ರಾಮದುರ್ಗ, ಶಿವಮೊಗ್ಗ, ಧಾರವಾಡ ಮೂಲದವರಿದ್ದಾರೆ. ಅವರನ್ನ ಬಂಧಿಸಿ ವಿಚಾರಣೆಗೆ ಒಳಪಡಿಸುವ ಕೆಲಸ ಮಾಡುತ್ತೇವೆ. ಇವರಿಂದ ಈ ಹಿಂದೆಯೂ ಪ್ರಕರಣ ನಡೆದಿದೆ. ಎಲ್ಲವನ್ನ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಬಾಗಲಕೋಟೆ ಎಸ್.ಪಿ.ಅಮರನಾಥ ರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು| ಬಿಬಿಎಂಪಿ ಕಸದ ಲಾರಿಗೆ ಅಕ್ಕ-ತಂಗಿ ಬಲಿ