– ಜೈಲಿಂದಲೇ ಮಹಿಳೆಗೆ ಕೊಲೆ ಬೆದರಿಕೆ ಕರೆ
ಬೆಂಗಳೂರು: ಇದು ಸಿನಿಮಾ ಶೈಲಿಯಂತೆ ಒನ್ ವೇ ಲವ್ ಸ್ಟೋರಿ (Love Storty). ಆದ್ರೆ ಕಥೆಯಲ್ಲಿ ಪ್ರೇಮಿಯೇ ವಿಲನ್ ಆಗಿದ್ದಾನೆ. ಜೈಲಿನಿಂದಲೇ ಪ್ರಿಯತಮೆಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಇದರಿಂದ ಪರಪ್ಪನ ಅಗ್ರಹಾರ ಜೈಲು (Parappana Agrahara Jail) ಮತ್ತೆ ಅಕ್ರಮಗಳ ಅಡ್ಡೆಯಾಯ್ತಾ ಎಂಬ ಮಾತುಗಳು ಕೇಳಿಬರುತ್ತಿವೆ.
ಇದು ಒಂಥರಾ ಒನ್‌ವೇ ಲವ್‌ಸ್ಟೋರಿ ಪತಿಯಿಂದ ದೂರವಾಗಿದ್ದ ಮಹಿಳೆಯ ಹಿಂದೆ ಬಿದ್ದ ಪಾಗಲ್ ಪ್ರೇಮಿ, ಪ್ರೀತಿ ಮಾಡುವಂತೆ ಆಕೆಯನ್ನ ಕಾಡತೊಡಗಿಸಿದ್ದ. ಶ್ರೀನಿವಾಸ ಎಂಬಾತ ಮಹಿಳೆಯ ಹಿಂದೆ ಬಿದ್ದು ಪ್ರೀತಿಸುವಂತೆ ಕಾಡತೊಡಗಿದ್ದ. ಪ್ರೀತಿಸದೇ ಇದ್ರೆ ಆ್ಯಸಿಡ್ ಹಾಕ್ತೀನಿ ಅಂತಾನೂ ಬೆದರಿಕೆ ಹಾಕಿದ್ದನಂತೆ. ಈಗಾಗಲೇ ಮದುವೆಯಾಗಿ ಗಂಡನಿಂದ ದೂರವಾಗಿದ್ದ ಮಹಿಳೆ, ಈತನ ಹುಚ್ಚುತನಕ್ಕೆ ಮನಸೋತು ಪ್ರೀತಿಗೆ ಸಮ್ಮತಿಸಿದ್ದಳು. ಇದನ್ನೂ ಓದಿ: ಮಣಿಪುರದಲ್ಲಿ ಮತ್ತೆ ಗುಂಡಿನ ದಾಳಿ – ಇಬ್ಬರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
ಕೆಲಕಾಲ ಇಬ್ಬರು ಪ್ರೀತಿಯ ಗುಂಗಲ್ಲಿ ತೇಲಾಡಿದ್ದಾರೆ. ಆದ್ರೆ ಮಹಿಳೆ ಮದುವೆ (Marriage) ವಿಚಾರ ತೆಗೆದಿದ್ದೇ ತಡ ಶ್ರೀನಿವಾಸ ಉಲ್ಟಾ ಹೊಡೆದಿದ್ದಾನೆ. ನಿನ್ನನ್ನ ಮದುವೆ ಆಗಲ್ಲ ಜೊತೆಯಲ್ಲೇ ಇರು ಸಾಕು ಅಂದಿದ್ದನಂತೆ. ಇದರೊಂದಿಗೆ ಶ್ರೀನಿವಾಸ ಮತ್ತು ಆತನ ತಾಯಿ ಸೇರ್ಕೊಂಡು ಮಹಿಳೆ ಮೇಲೆ ಹಲ್ಲೆ ಸಹ ನಡೆಸಿದ್ದಾರೆ. ಇದರಿಂದ ನೊಂದ ಮಹಿಳೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಶ್ರೀನಿವಾಸನನ್ನ ಜೈಲಿಗೆ ಕಳುಹಿಸಿದ್ದಾಳೆ. ಇದನ್ನೂ ಓದಿ: ಕತ್ತು ಸೀಳಿ ಗಗನಸಖಿ ಹತ್ಯೆಗೈದಿದ್ದ ಆರೋಪಿ – ಲಾಕಪ್‌ನಲ್ಲೇ ಪ್ಯಾಂಟ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ
ಇತ್ತ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಶ್ರೀನಿವಾಸ ಜೈಲಿನಲ್ಲಿದ್ದುಕೊಂಡೇ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾನೆ ಅಂತಾ ಮಹಿಳೆ ಮತ್ತೊಂದು ಆರೋಪ ಮಾಡಿದ್ದಾರೆ. ಶ್ರೀನಿವಾಸ ಜೈಲಿನಿಂದಲೇ ವಾಟ್ಸಪ್ ಕರೆ ಮಾಡಿ ತನ್ನನ್ನ ನೋಡಲು ಜೈಲಿಗೆ ಬರಬೇಕು ಅಂತಾ ಧಮ್ಕಿ ಹಾಕಿದ್ದನಂತೆ. ನನ್ನನ್ನ ಜೈಲಿಗೆ ಹಾಕಿಸಿದ್ದೀಯಾ ಅಲ್ವಾ, ನೀನು ಜೈಲಿಗೆ ಬಾ ನನ್ನೊಟ್ಟಿಗೆ ಇರು, ಇಲ್ಲದಿದ್ದರೆ ಹೊರಗೆ ಬಂದು ಕೊಲೆ ಮಾಡ್ತೀನಿ ಅಂತ ಬೆದರಿಕೆ ಹಾಕಿರುವುದಾಗಿ ಮಹಿಳೆ ದೂರಿದ್ದಾಳೆ.
ಇದೀಗ ಮತ್ತೆ ಆರೋಪಿ ವಿರುದ್ಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದು, ಇದರಿಂದ ಜೈಲಿನಲ್ಲಿ ಖೈದಿಗಳಿಗೆ ಮೊಬೈಲ್ ಆರಾಮಾಗಿ ಸಿಗ್ತಿದೆ ಅನ್ನೋದಕ್ಕೆ ಸಾಕ್ಷಿ ಸಿಕ್ಕಿಂತಾಗಿದೆ .
Web Stories