ಕಾರವಾರ: ಕುರಾನ್ ಓದಲು ಬರುತಿದ್ಧ ಅಪ್ರಾಪ್ತ ಬಾಲಕನ ಮೇಲೆ ಮೌಲ್ವಿಯೊಬ್ಬ (Mawlawi) ಮಸೀದಿಯಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ ನಗರದಲ್ಲಿ ನಡೆದಿದೆ.
ಘಟನೆ ಸಂಬಂಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನ ಬಂಧನ ಮಾಡಲಾಗಿದೆ. ಇದನ್ನೂ ಓದಿ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಬುರ್ಕಾ ಧರಿಸಿ ನೃತ್ಯ – ವ್ಯಕ್ತಿ ಬಂಧನ
ಪಶ್ಚಿಮ ಬಂಗಾಳ ಮೂಲದ ಅಬ್ಬುಸ್ ಸಮದ್ ಜಿಯಾಯಿ (25) ಬಂಧಿತ ಮೌಲ್ವಿಯಾಗಿದ್ದಾನೆ. ನಿನ್ನೆ ರಾತ್ರಿ ಬಾಲಕನಿಗೆ ಮಸೀದಿಯಲ್ಲಿ ವಸ್ತ್ರ ಬಿಚ್ಚಿಸಿ ಲೈಂಗಿಕ ದೌರ್ಜನ್ಯವೆಸಗಿದ್ದನು.
ಈ ಕುರಿತು ಬಾಲಕನ ತಂದೆಯ ದೂರಿನನ್ವಯ ಮೌಲ್ವಿಯನ್ನು ಕುಮಟಾ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇದನ್ನೂ ಓದಿ: ಮಸೀದಿ ಮೇಲೆ ಭಗವಾಧ್ವಜ ಹಾರಿಸಿ ಪರಾರಿಯಾದ ಕಿಡಿಗೇಡಿಗಳು
Web Stories