ಮೈಸೂರು: ಹೆಚ್ಚಿನ ಪ್ರಮಾಣದ ಬಿಪಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಆಯುರ್ವೇದದ ಓದುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಮೈಸೂರಿನ ಕುವೆಂಪುನಗರದ ಎಂ ಬ್ಲಾಕ್ ನಲ್ಲಿ ನಡೆದಿದೆ.
ರಿಂಕು (23) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ನಿವಾಸಿಯಾದ ರಿಂಕು ಆಯುರ್ವೇದ ವೈದ್ಯಕೀಯದಲ್ಲಿ ಅಂತಿಮ ವರ್ಷವನ್ನು ಒದುತ್ತಿದ್ದಳು. ರಿಂಕು ಸೆಪ್ಟೆಂಬರ್ 15 ರಂದು ಮಾತ್ರೆ ಸೇವಿಸಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಸಾವನ್ನಪ್ಪಿದ್ದಾಳೆ.
ಆತ್ಮಹತ್ಯೆಗೆ ಯಾವುದೇ ಕಾರಣ ತಿಳಿದು ಬಂದಿಲ್ಲ ಹಾಗೂ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.