– ತಾಯಿ, ಇಬ್ಬರು ಮಕ್ಕಳು ಸಾವು, 1 ಮಗು ಅಪಾಯದಿಂದ ಪಾರು
ಚಿಕ್ಕೋಡಿ: ಕೌಟುಂಬಿಕ ಕಲಹಕ್ಕೆ ಮನನೊಂದು ಮಹಿಳೆಯೊಬ್ಬರು 3 ಮಕ್ಕಳೊಂದಿಗೆ ಕೃಷ್ಣಾ ನದಿಗೆ (Krishna River) ಹಾರಿದ್ದಾರೆ. ಇಬ್ಬರು ಮಕ್ಕಳು ಮತ್ತು ತಾಯಿ ಸಾವನ್ನಪ್ಪಿದ್ದು, 1 ಮಗು ಪಾರಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ.
Advertisement
ತಾಯಿ ಶಾರದಾ ಡಾಲೆ(32) ಮಕ್ಕಳಾದ ಅಮೃತಾ(14), ಆದರ್ಶ(8) ಮೃತರು. ಅನುಕ್ಷಾ ಡಾಲೆ ಬದುಕುಳಿದಿದ್ದು, ರಾಯಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ನನ್ನನ್ನು ‘ಲೇಡಿ ಸೂಪರ್‌ಸ್ಟಾರ್’ ಎಂದು ಕರೆಯಬೇಡಿ- ಫ್ಯಾನ್ಸ್‌ಗೆ ನಯನತಾರಾ ಮನವಿ
Advertisement
Advertisement
ಪತಿ ಅಶೋಕ ಡಾಲೆ(45) ಪ್ರತಿ ನಿತ್ಯ ಕುಡಿದು ಬಂದು ಪತ್ನಿ ಹಾಗೂ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ. ಇದರಿಂದ ಮನನೊಂದ ಶಾರದಾ ಮೂವರು ಮಕ್ಕಳೊಂದಿಗೆ ನದಿಗೆ ಹಾರಿದ್ದಾರೆ. 1 ಮಗುವನ್ನು ಕೂಡಲೇ ರಕ್ಷಣೆ ಮಾಡಿದ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸ್ ತಿಳಿಸಿದ್ದಾರೆ. ಇದನ್ನೂ ಓದಿ: ಸಾಲದ ಶ್ಯೂರಿಟಿಗೆ ಸಹಿ ಹಾಕುವಂತೆ ಬೆದರಿಕೆ – ಮನನೊಂದ ಮಹಿಳೆ ಆತ್ಮಹತ್ಯೆ
Advertisement
ಅಶೋಕ ಡಾಲೆಯನ್ನು ಕುಡಚಿ ಪೊಲೀಸರ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.