ಮೈಸೂರು: ಇಲ್ಲಿನ ಉದಯಗಿರಿಯಲ್ಲಿ (Udayagiri) ನಡೆದ ಕಲ್ಲು ತೂರಾಟ ಪ್ರಕರಣಕ್ಕೂ ಮುನ್ನ ಮೌಲ್ವಿಯೊಬ್ಬರು (Moulvi) ಪ್ರಚೋದನಕಾರಿ ಭಾಷಣ ಮಾಡಿರುವ ವೀಡಿಯೋ ವೈರಲ್ ಆಗಿದೆ.
ಮೈಕ್ ಹಿಡಿದು ಮುಫ್ತಿ ಮುಷ್ತಾಕ್ ಮಕ್ಬೋಲಿ ಎಂಬ ಮೌಲ್ವಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕಲ್ಲು ಹೊಡೆಯುವುದು ಮುಸ್ಲಿಂ ಧರ್ಮದಲ್ಲೇ ಇದೆ: ಪ್ರತಾಪ್ ಸಿಂಹ
Advertisement
Advertisement
ಧರ್ಮಕ್ಕಾಗಿ ಬದುಕಿರುವ ಮುಸ್ಲಿಮರು ಇನ್ನೂ ಇದ್ದಾರೆ. ಧರ್ಮ ರಕ್ಷಣೆಯ ಬದ್ಧತೆ ನಿನ್ನೆನೂ ಇತ್ತು, ಇವತ್ತು ಇದೆ. ಎಲ್ಲಾ ಘೋಷಣೆ ಕೂಗಿ ನಾವು ಪ್ರಾಣ ಬೇಕಾದರೂ ಕೊಡುತ್ತೇವೆ. ಸದಾ ಮುಸ್ಲಿಮರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಸುರೇಶ್ ಹೆಸರಿನ ನಾಯಿ, ಸುರೇಶ್ ಹೆಸರಿನ ಹರಾಮಿ. ನನ್ನ ಮಾಲೀಕನ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದಾನೆ. ಆತನನ್ನು ಕೂಡಲೇ ಬಂಧಿಸಿ. ಆತನನ್ನು ನೇಣಿಗೆ ಹಾಕಬೇಕು, ಮರಣದಂಡನೆ ವಿಧಿಸಬೇಕು ಎಂದು ಮೌಲ್ವಿ ಮಾತನಾಡಿದ್ದಾರೆ.
Advertisement
Advertisement
ನಿಮ್ಮ ಇಚ್ಚೆ ಏನು? ಆತನಿಗೆ ಮರಣದಂಡನೆಯಾಗಬೇಕು ಎಂಬುದು. ಮೈಸೂರಿನ ಎಲ್ಲಾ ಮುಸ್ಲಿಮರು ಒಂದಾಗಿ. ಇದಕ್ಕೆ ತಕ್ಕ ಉತ್ತರ ಕೊಡಬೇಕಾಗಿದೆ. ಅವಶ್ಯಕತೆ ಬಂದರೆ ನಮ್ಮ ತಲೆ ಬೇಕಾದರೂ ಕತ್ತರಿಸಿಕೊಳ್ಳುತ್ತೇವೆ. ನಮ್ಮ ಮಕ್ಕಳ ತಲೆ ಬೇಕಾದರೂ ಬಲಿಕೊಡುತ್ತೇವೆ ಎಂದು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ. ಇದನ್ನೂ ಓದಿ: ಮೈಸೂರು: ಅವಹೇಳನಕಾರಿ ಪೋಸ್ಟ್ ವಿಚಾರಕ್ಕೆ ಠಾಣೆ ಮೇಲೆಯೇ ಕಲ್ಲು ತೂರಾಟ – 14 ಪೊಲೀಸರಿಗೆ ಗಾಯ