ಮಂಡ್ಯ: ಚಲಿಸುತ್ತಿದ್ದ ಕಾರಿಗೆ (Car) ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತಾವರೆಕೆರೆ ಗೇಟ್ (Tavarekere Gate) ಸಮೀಪದ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಗುಜರಾತ್ ಮೂಲದ, ಬೆಂಗಳೂರಿನ ನಿವಾಸಿ ಸುಧಾ ಜೈನ್ (58) ಮೃತ ಮಹಿಳೆ. ಶ್ರವಣಬೆಳಗೊಳದಿಂದ ಬೆಂಗಳೂರಿಗೆ ಕುಟುಂಬ ವಾಪಸ್ಸಾಗುತ್ತಿದ್ದ ವೇಳೆ ಮತ್ತೊಂದು ಕಾರು ಹಿಂದಿಕ್ಕುವ ಭರದಲ್ಲಿ ಅತೀವೇಗವಾಗಿ ಬಂದು ಹಿಂಬದಿಯಿಂದ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಸ್ವಿಫ್ಟ್ ಡಿಸೈರ್ ಕಾರಿನಲ್ಲಿದ್ದ ಸುಧಾ ಜೈನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಲ್ಲದೇ ರಸ್ತೆ ಬದಿ ಕೆಲಸ ಮಾಡುತ್ತಿದ್ದ ಪೆಟ್ರೋಲ್ ಬಂಕ್ ಮಾಲೀಕನಿಗೂ ಕಾಲು ಮುರಿತಗೊಂಡಿದೆ. ಇದನ್ನೂ ಓದಿ: ಶಿವಮೊಗ್ಗ ಮೃಗಾಲಯದಲ್ಲಿದ್ದ ಹುಲಿ ‘ದಶಮಿ’ ಅನಾರೋಗ್ಯದಿಂದ ಸಾವು
ಭೀಕರ ಅಪಘಾತದ ದೃಶ್ಯ ಮತ್ತೊಂದು ಕಾರಿನ ಡ್ಯಾಶ್ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಾಯಾಳುಗಳಿಗೆ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಮೃತ ಮಹಿಳೆಯ ಮೃತದೇಹವನ್ನು ಶವಾಗಾರಕ್ಕೆ ರವಾನಿಸಲಾಗಿದೆ. ಅಪಘಾತದ ಬಳಿಕ ಕಾರು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಬೆಳ್ಳೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಎರಡೂ ಕಾರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ತಗಡಿನ ಮನೆಗೆ ಬೆಂಕಿ; ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಗೃಹೋಪಯೋಗಿ ವಸ್ತುಗಳು
