ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಶಾಲಾ ಮಕ್ಕಳಿಗೆ ಬ್ಯಾಗ್ ಪುಸ್ತಕ ಮತ್ತು ಪೆನ್ನುಗಳನ್ನು ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ ವಿತರಿಸಿದ್ದಾರೆ.
ನಾರಾಯಣ ಸ್ವಾಮಿ ಇಂದು ಪ್ರಧಾನಿ ನರೇಂದ್ರ ಮೋದಿರವರ 71 ಜನ್ಮದಿನವನ್ನು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜೋಗಿಹಟ್ಟಿ (ಗೊಲ್ಲರ ಹಟ್ಟಿ) ಗ್ರಾಮದಲ್ಲಿ ಆಚರಿಸಿ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಜೋಗಿಹಟ್ಟಿ ಗ್ರಾಮದ ಪ್ರಾರ್ಥಮಿಕ ಶಾಲೆಗೆ ಹೆಚ್ಚಿನ ಕೊಠಡಿಗಳನ್ನು ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ನೀಡುವ ಭರವಸೆ ನೀಡಿದ್ದಾರೆ.
Advertisement
Advertisement
ಶಿಕ್ಷಣದಿಂದ ಮಾತ್ರ ಸಮಾಜ ಮತ್ತು ದೇಶದ ಅಭಿವೃಧ್ಧಿ ಸಾಧ್ಯ, ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ. ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸರ್ಕಾರಿ ಬಸ್ ಬಿಡುವಂತೆ ನಿರ್ದೇಶನ ನೀಡುವುದಾಗಿ ಹೇಳಿದರು.
Advertisement
ಚಳ್ಳಕೆರೆ ತಾಲ್ಲೂಕು ಜೋಗಿಹಟ್ಟಿ (ಗೊಲ್ಲರಹಟ್ಟಿ) ಯಲ್ಲಿ ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್, ಪುಸ್ತಕ, ಪೆನ್ಸಿಲ್, ಪೆನ್ ವಿತರಣೆ ಮಾಡಲಾಯಿತು. @narendramodi @AmitShah @JPNadda @BJP4Karnataka @nalinkateel pic.twitter.com/nKCrCgCTWt
— A Narayanaswamy (@ANarayana_swamy) September 17, 2021
Advertisement
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್, ಪುಸ್ತಕ, ಪೆನ್ಸಿಲ್, ಪೆನ್ ವಿತರಣೆ ಮಾಡಿದ್ದಾರೆ.