LatestMain PostNational

ರಾಹುಲ್ ಗಾಂಧಿ ನಿಜವಾದ ಹಿಂದೂ ಅಲ್ಲ: ನಾರಾಯಣಸ್ವಾಮಿ ವಾಗ್ದಾಳಿ

ಲಕ್ನೋ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣೆಗೆ ಬಂದಾಗ ಮಾತ್ರ ಅವರು ಹಿಂದೂ ಹಾಗೂ ಹಿಂದುತ್ವದ ಕುರಿತು ಹೇಳಿಕೆ ನೀಡುತ್ತಾರೆ. ಅವರು ನಿಜವಾದ ಹಿಂದೂ ಅಲ್ಲ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ.

ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಫೆಫ್ನಾ ಪ್ರದೇಶದಲ್ಲಿ ಆಯೋಜಿಸಲಾದ ಸಾಮಾಜಿಕ ಸಬಲೀಕರಣ ಶಿಬಿರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ರಾಹುಲ್ ಗಾಂಧಿ ಹಿಂದೂಗಳು ಸಹಿಷ್ಣುತೆ ಹೊಂದಿರುತ್ತಾರೆ. ಆದರೆ ಹಿಂದುತ್ವವಾದಿಗಳು ಅಧಿಕಾರದಾಹ ಹೊಂದಿರುತ್ತಾರೆ ಎನ್ನುವ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವರು ರಾಹುಲ್ ಗಾಂಧಿ ನಿಜವಾದ ಹಿಂದೂ ಅಲ್ಲ ಎಂದು ಕಿಡಿಕಾರಿದ್ದಾರೆ. ದನ್ನೂ ಓದಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಅವಶ್ಯಕತೆ ಏನಿದೆ?: ಎಚ್.ಡಿ ರೇವಣ್ಣ

ಬಿಜೆಪಿ 2014ರಲ್ಲಿ ಅಧಿಕಾರಕ್ಕೆ ಬಂದಿದೆ. ಆದರೆ ಅದು ಅಧಿಕಾರಕ್ಕೆ ಬರುವುದಕ್ಕೂ ಮೊದಲು ದೇಶದಲ್ಲಿ ಗುಂಪು ಹತ್ಯೆ (lynching)  ಎಂಬುದನ್ನು ಪ್ರಾಯೋಗಿಕವಾಗಿ ನೋಡಲು ಸಾಧ್ಯವೇ ಇರಲಿಲ್ಲ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು. ಈ ಹೇಳಿಕೆಯನ್ನು ನಾರಾಯಣಸ್ವಾಮಿ ಅವರು ತಿರಸ್ಕರಿಸಿದ್ದಾರೆ. ದೇಶದಲ್ಲಿ ಏನಾಗುತ್ತಿದೆ ಎಂದು ಕಾಂಗ್ರೆಸ್ ನಾಯಕರಿಗೆ ತಿಳಿಯುತ್ತಿಲ್ಲ ವಾಗ್ದಾಳಿ ಮಾಡಿದ್ದಾರೆ. ದನ್ನೂ ಓದಿ: 2014ಕ್ಕೂ ಮೊದಲು ಗುಂಪು ಹತ್ಯೆ ನಡೆಯುತ್ತಲೇ ಇರಲಿಲ್ಲ: ರಾಹುಲ್ ಗಾಂಧಿ

Leave a Reply

Your email address will not be published. Required fields are marked *

Back to top button