ನರ್ಸ್ ವೇಷ ಧರಿಸಿ ಜಿಲ್ಲಾಸ್ಪತ್ರೆಯಿಂದ ನವಜಾತ ಶಿಶು ಕಳ್ಳತನ

Public TV
1 Min Read
baby kidnap 2

ಹಾವೇರಿ: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದಾಗಿ ಯಾಮಾರಿಸಿ ನವಜಾತ ಶಿಶುವನ್ನು (Newborn Baby) ಕಳ್ಳತನ ಮಾಡಿದ ಘಟನೆ ಹಾವೇರಿಯಲ್ಲಿ (Haveri) ನಡೆದಿದೆ.

ಬ್ಯಾಡಗಿ ತಾಲೂಕಿನ (Byadagi Taluk) ಗುಡ್ಡದಹೊಸಳ್ಳಿ ಗ್ರಾಮದ ರಂಜಿತಾ ಕುಂಬಾರ ಎಂಬುವವರು ಶುಕ್ರವಾರ ಸಂಜೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ (District Hospital) ಹೆಣ್ಣುಮಗುವಿಗೆ ಜನ್ಮ ನೀಡಿದ್ದರು. ಶನಿವಾರ ಸಂಜೆ ಮಹಿಳೆಯೊಬ್ಬಳು ನರ್ಸ್ ವೇಷದಲ್ಲಿ ಬಂದು ಮಗುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದಾಗಿ ಹೇಳಿ ಶಿಶುವಿನ ಅಜ್ಜಿಯನ್ನು ಯಾಮಾರಿಸಿ ಮಗುವನ್ನು ಕಳ್ಳತನ ಮಾಡಿದ್ದಾಳೆ. ಇದನ್ನೂ ಓದಿ: ಕಾಂಗ್ರೆಸ್ ನನ್ನ ಸಮಾಧಿ ಮಾಡುವ ಕನಸು ಕಾಣುತ್ತಿದೆ: ಮೋದಿ ವಾಗ್ದಾಳಿ

baby kidnap 3

ಶಿಶುವಿಗೆ ಚಿಕಿತ್ಸೆ ಕೊಡಿಸುವುದಾಗಿ ಹೇಳಿದ ನರ್ಸ್ ವೇಷಧಾರಿ, ಅಜ್ಜಿ ಹಾಗೂ ಶಿಶುವನ್ನು ನಗರದ ವಿವಿಧ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಳು. ಮರಳಿ ಜಿಲ್ಲಾಸ್ಪತ್ರೆಗೆ ಬರುವ ಸಂದರ್ಭ ಮಾರ್ಗಮಧ್ಯದಲ್ಲಿ ಹಣ್ಣು ತೆಗೆದುಕೊಂಡು ಬರುವುದಾಗಿ ಅಜ್ಜಿಯನ್ನು ನಂಬಿಸಿ ಶಿಶುವನ್ನು ಕಳ್ಳತನ ಮಾಡಿದ್ದಾಳೆ. ಕಳ್ಳತನದ ದೃಶ್ಯ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನವಜಾತ ಶಿಶುವನ್ನು ಕಳೆದುಕೊಂಡ ಪೋಷಕರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆಗೊಳಿಸಿದ ಮೋದಿ    

baby kidnap 4

ಈ ಕುರಿತು ಹಾವೇರಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಜನಾರ್ದನ ರೆಡ್ಡಿ ಭರ್ಜರಿ ರೋಡ್ ಶೋ – ಬಾಗೇಪಲ್ಲಿಯಲ್ಲಿ ಅಭ್ಯರ್ಥಿ ನಿಲ್ಲಿಸಲು ತಯಾರಿ

Share This Article
Leave a Comment

Leave a Reply

Your email address will not be published. Required fields are marked *