ಬೆಂಗಳೂರು : ನಗರದಲ್ಲಿ ಯಾವುದೇ ಭೂಕಂಪನ ಆಗಿಲ್ಲ ಎಂದು ಪ್ರಾಕೃತಿಕ ವಿಕೋಪ ನಿರ್ವಹಣಾ ಕೇಂದ್ರ ಸ್ಪಷ್ಟ ಪಡಿಸಿದೆ.
ಸ್ಥಳೀಯರಿಗೆ ಆದ ಕಂಪನದ ಅನುಭವ ಕುರಿತಂತೆ ವರದಿಯನ್ನು ಸ್ವೀಕರಿಸಲಾಗಿದೆ. ಹೆಮ್ಮಿಗೆಪುರ, ಕೆಂಗೇರಿ, ಜ್ಞಾನಭಾರತಿ, ರಾಜರಾಜೇಶ್ವರಿ ನಗರ ಮತ್ತು ಕಗ್ಗಲೀಪುರ ಸೇರಿಂದಂತೆ ಬೆಂಗಳೂರಿನ ಹಲವೆಡೆ 2021ರ ನವೆಂಬರ್ 26ರಂದು ಬೆಳಗ್ಗೆ 11.50 ರಿಂದ 12.15ರವರೆಗೆ ಯಾವುದೇ ಭೂಕಂಪನ ಸಂಭವಿಸಿಲ್ಲ. ಈ ಅವಧಿಯಲ್ಲಿ ಉಂಟಾಗಿರುವುದು ನಿಗೂಢ ಶಬ್ದವಷ್ಟೇ ಎಂದು ವಿಶ್ಲೇಷಿಸಲಾಗಿರುವುದಾಗಿ ತಿಳಿಸಿದ್ದಾರೆ ಎಂದು ವಿಶ್ಲೇಷಿಸಲಾಗಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.
Advertisement
Advertisement
ಇಂದು ಮಧ್ಯಾಹ್ನ 12:15ರ ಸುಮಾರಿಗೆ 10 ರಿಂದ 15 ನಿಮಿಷಗಳ ಅಂತರದಲ್ಲಿ 2 ಭಾರೀ ಬೆಂಗಳೂರಿನ ಆರ್.ಆರ್ ನಗರ, ನಾಗರಭಾವಿ, ಕೆಂಗೇರಿ, ಯಶವಂತಪುರ, ಕಗ್ಗಲಿಪುರ, ಹೆಮ್ಮಿಗೆಪುರ, ಜ್ಞಾನಭಾರತಿ, ಉಲ್ಲಾಳ ಸೇರಿದಂತೆ ಹಲವೆಡೆ ದೊಡ್ಡ ಶಬ್ಧ ಕೇಳಿ ಬಂದಿತ್ತು . ಇದರಿಂದಾಗಿ ಬೆಂಗಳೂರಿನ ಜನರು ಆತಂಕಕ್ಕೆ ಒಳಗಾಗಿದ್ದರು.
Advertisement
Advertisement
ಮತ್ತೊಂದೆಡೆ ಮಂಡ್ಯದಲ್ಲಿ ಕೂಡ ಬೆಳಗ್ಗೆ 11:50ರ ಸುಮಾರಿಗೆ ಇದೇ ರೀತಿ ಜೋರು ಶಬ್ದ ಕೇಳಿ ಬಂದಿದ್ದು, ಶಬ್ಧಕ್ಕೆ ಮನೆ, ಕಚೇರಿ ಕಟ್ಟಡಗಳ ಕಿಟಕಿಗಳು, ವಸ್ತುಗಳು ನಡುಗಿದೆ. ಈ ಹಿಂದೆ ಕೆಆರ್‍ಎಸ್, ಪಾಂಡವಪುರ, ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ಕೂಡ ಈ ಶಬ್ಧ ಕೇಳಿಬಂದಿತ್ತು. ಈ ಶಬ್ಧಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ.