ರಾಮಮಂದಿರ ಪ್ರಸಾದ ಅಂತಾ ಸ್ವೀಟ್‌ ಮಾರಾಟ – ಆನ್‌ಲೈನ್‌ ಶಾಪಿಂಗ್‌ ಸಂಸ್ಥೆಗೆ ನೋಟಿಸ್‌

Public TV
1 Min Read
sweets

ನವದೆಹಲಿ: ‘ಶ್ರೀರಾಮ ಮಂದಿರ ಅಯೋಧ್ಯೆ ಪ್ರಸಾದ’ ಹೆಸರಿನಲ್ಲಿ ಸ್ವೀಟ್ಸ್‌ ಮಾರಾಟ ಮಾಡುತ್ತಿರುವ ಆರೋಪದ ಮೇಲೆ ಆನ್‌ಲೈನ್‌ ಶಾಪಿಂಗ್‌ ಸಂಸ್ಥೆಯೊಂದಕ್ಕೆ ಕೇಂದ್ರ ಸರ್ಕಾರ ನೋಟಿಸ್‌ ನೀಡಿದೆ.

ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಇನ್ನೂ ಆಗಿಲ್ಲ. ಈ ಹೊತ್ತಿನಲ್ಲಿ ರಾಮಮಂದಿರದ ಪ್ರಸಾದ ಎಂದು ಹೇಳಿಕೊಂಡು ಸ್ವೀಟ್ಸ್‌ ಮಾರಾಟ ಮಾಡುವ ಮೂಲಕ ಗ್ರಾಹಕರ ದಾರಿ ತಪ್ಪಿಸಲಾಗುತ್ತಿದೆ ಎಂದು ಆನ್‌ಲೈನ್‌ ಶಾಪಿಂಗ್‌ ಸಂಸ್ಥೆಯೊಂದರ ವಿರುದ್ಧ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ದೂರು ನೀಡಿತ್ತು. ಇದನ್ನೂ ಓದಿ: ಪ್ರಾಣಪ್ರತಿಷ್ಠೆ ಕಣ್ತುಂಬಿಕೊಳ್ಳಲು ರಾಜ್ಯದಲ್ಲಿ ಸೋಮವಾರ ರಜೆ ಘೋಷಿಸಿ: ಸಿಎಂಗೆ ತೇಜಸ್ವಿ ಸೂರ್ಯ ಮನವಿ

ram mandir 3

ಈ ಸಂಬಂಧ ಸಂಸ್ಥೆಗೆ ಕೇಂದ್ರ ಸರ್ಕಾರ ನೋಟಿಸ್‌ ನೀಡಿದೆ. ಇಂತಹ ಕ್ರಮಗಳು ಗ್ರಾಹಕರನ್ನು ತಪ್ಪುದಾರಿಗೆಳೆಯುತ್ತವೆ. ಗ್ರಾಹಕರ ಖರೀದಿ ನಿರ್ಧಾರಗಳ ಮೇಲೂ ಪ್ರಭಾವ ಬೀರುತ್ತವೆ ಎಂದು ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಎಚ್ಚರಿಸಿದೆ.

ಆನ್‌ಲೈನ್‌ ಶಾಪಿಂಗ್‌ ಸಂಸ್ಥೆಗೆ ಸಿಸಿಪಿಎ ನೋಟಿಸ್‌ ನೀಡಿದ್ದು, 7 ದಿನಗಳ ಒಳಗೆ ಸ್ಪಷ್ಟನೆ ನೀಡುವಂತೆ ಸೂಚಿಸಿದೆ. ಇಲ್ಲದಿದ್ದರೆ, ಗ್ರಾಹಕ ಸಂರಕ್ಷಣಾ ಕಾಯ್ದೆ,-2019 ರ ನಿಬಂಧನೆಗಳ ಅಡಿಯಲ್ಲಿ ಕಂಪನಿಯ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದೆ. ಇದನ್ನೂ ಓದಿ: ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ತಲೆ ಎತ್ತಿದೆ 15 ಅಡಿ ರಾಮನ ಮೂರ್ತಿ!

ಜನವರಿ 22 ರಂದು ರಾಮಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಜರುಗಲಿದೆ. ಈ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ರಾಮಜಪ, ಶ್ರೀರಾಮ ಭಜನೆ ಮಾಡಲಾಗುತ್ತಿದೆ. ದೇಶದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ.

Share This Article