ವಿಜಯಪುರ: ನಿಂತಿದ್ದ ಎಲೆಕ್ಟ್ರಿಕ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿರುವ ಘಟನೆ ವಿಜಯಪುರ (Vijayapura) ನಗರದ ಸೈನಿಕ ಸ್ಕೂಲ್ ಬಳಿ ನಡೆದಿದೆ.
ಸೈನಿಕ್ ಸ್ಕೂಲ್ ಬಳಿ ಎಲೆಕ್ಟ್ರಿಕ್ ಕಾರು ಪಾರ್ಕ್ ಆಗಿತ್ತು. ಈ ವೇಳೆ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಸುಟ್ಟು ಕರಕಲಾಗಿದೆ. ಇನ್ನೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿಗಾಹುತಿಯಾಗಿರುವ ಕಾರಿನ ಮಾಲೀಕ ಕುರಿತು ಯಾವುದೇ ಮಾಹಿತಿ ತಿಳಿದುಬಂದಿಲ್ಲ. ಇದನ್ನೂ ಓದಿ: ಪಾಕ್ ಅರೆಸೈನಿಕ ಪಡೆ ಪ್ರಧಾನ ಕಚೇರಿ ಆವರಣದಲ್ಲಿ ಸೂಸೈಡ್ ಬಾಂಬ್ ದಾಳಿ – ಮೂವರು ಸಾವು
ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
