ನಮ್ಮ ಮೆಟ್ರೋ ಹಳಿಗೆ ಹಾರಿದ ಪ್ರಯಾಣಿಕ – 45 ನಿಮಿಷ ಸಂಚಾರ ವ್ಯತ್ಯಯ!

Public TV
1 Min Read
namma metro green line

ಬೆಂಗಳೂರು: ನಮ್ಮ ಮೆಟ್ರೋ ಹಸಿರು ಮಾರ್ಗದ (Namma Metro Green Line) ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ (Jalahalli Metro Station) ಪ್ರಯಾಣಿಕರೊಬ್ಬರು ರೈಲ್ವೇ ಹಳಿಗೆ ಜಿಗಿದಿದ್ದಾರೆ. ಇಂದು ಸಂಜೆ 7.12ಕ್ಕೆ ಈ ಘಟನೆ ನಡೆದಿದ್ದು, ಹಳಿಗೆ ಹಾರಿದ ಪ್ರಯಾಣಿಕನನ್ನು ಅಸ್ಪತ್ರೆಗೆ ದಾಖಲಿಸಲಾಗಿದೆ.

ಪ್ಲಾಟ್‌ಫಾರ್ಮ್ ಕೊನೆಯಲ್ಲಿ ಕಾಯುತ್ತಿದ್ದ ಪ್ರಯಾಣಿಕರೊಬ್ಬರು ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರೈಲಿನ ಮುಂದೆ ಜಿಗಿದಿದ್ದಾರೆ. ತಕ್ಷಣ ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (BMRCL) ಸಿಬ್ಬಂದಿ ಅವರನ್ನು ರಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಸಂಜೀವಿನಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಯಲ್ಲಿ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಾಲಹಳ್ಳಿ ನಿಲ್ದಾಣದಲ್ಲಿ ಘಟನೆ ನಡೆದ ಕಾರಣ ಈ ಸಮಯದಲ್ಲಿ ಇತರ ನಿಲ್ದಾಣದ ಪ್ಲಾಟ್‌ ಫಾರ್ಮ್‌ ಗಳಲ್ಲಿ ಸ್ಥಗಿತಗೊಂಡ 4 ರೈಲುಗಳಿಂದ ಎಲ್ಲಾ ಪ್ರಯಾಣಿಕರನ್ನು ರೈಲಿನಿಂದ ಸುರಕ್ಷಿತವಾಗಿ ಹೊರತರಲಾಯಿತು.

ಘಟನೆಯಿಂದಾಗಿ ಸುಮಾರು 45 ನಿಮಿಷಗಳ ಕಾಲ ಯಶವಂತಪುರ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಹಸಿರು ಮಾರ್ಗದ ಕಾರ್ಯಾಚರಣೆ ನಡೆಸಲಾಯಿತು. ರಾತ್ರಿ 8.00 ಗಂಟೆಯಿಂದ ಸಂಪೂರ್ಣ ಹಸಿರು ಮಾರ್ಗದಲ್ಲಿ ಕಾರ್ಯಾಚರಣೆ ಪುನರಾರಂಭಿಸಲಾಗಿದೆ ಎಂದು ನಮ್ಮ ಮೆಟ್ರೋ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ್‌ ಚೌಹಾಣ್‌ ಹೇಳಿದ್ದಾರೆ. ಮೆಟ್ರೋ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಘಟನೆಯ ಮಾಹಿತಿ ನೀಡಿದ್ದು, ಯಾವ ಕಾರಣಕ್ಕೆ ಆತ ಹಳಿಗೆ ಜಿಗಿದಿದ್ದಾನೆ. ಆತನ ಹಿನ್ನೆಲೆ ಏನು ಪೊಲೀಸ್‌ ತನಿಖೆ ನಂತರವಷ್ಟೇ ಗೊತ್ತಾಗಬೇಕಿದೆ.

NAMMA METRO

ಜನವರಿ 1ರಂದು ನೇರಳೆ ಮಾರ್ಗದಲ್ಲಿ..!: ಜನವರಿ 1ರಂದು ಸೋಮವಾರ ನೇರಳೆ ಬಣ್ಣದ ಮೆಟ್ರೋ ಮಾರ್ಗದ ಇಂದಿರಾನಗರ ಮೆಟ್ರೋ ಸ್ಟೇಷನ್‌ ನಲ್ಲಿ ಮೆಟ್ರೋ ರೈಲ್ವೇ ಹಳಿ ಮೇಲೆ ಬಿದ್ದ ಮೊಬೈಲ್‌ ತೆಗೆಯಲು ಮಹಿಳೆಯೊಬ್ಬರು ಟ್ರ್ಯಾಕ್‌ ಗೆ ಇಳಿದಿದ್ದರು. ಇದರಿಂದಾಗಿ 15 ನಿಮಿಷಗಳ ಕಾಲ ಮೆಟ್ರೋ ಸಂಚಾರ ವ್ಯತ್ಯಯವಾಗಿತ್ತು. ಇದನ್ನೂ ಓದಿ: ಬೆಂಗಳೂರಲ್ಲಿ ಕೆಳಗೆ ಬಿದ್ದ ಮೊಬೈಲ್‌ ಎತ್ತಿಕೊಳ್ಳಲು ಮೆಟ್ರೋ ಟ್ರ್ಯಾಕ್‌ಗೆ ಜಿಗಿದ ಮಹಿಳೆ

 

Share This Article