ಬೆಂಗಳೂರು: ಈ ಬಾರಿಯ ಬಜೆಟ್ ಜನಪರವಾಗಿದ್ದು, ಸಿಎಂ ತಮ್ಮ ದಾಖಲೆಯ ಬಜೆಟ್‌ನ್ನು ಬಡವರು ಹಾಗೂ ಶ್ರಮಿಕರ ಪರವಾಗಿ ಮಂಡಿಸಿದ್ದಾರೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ (KH Muniyappa) ಬಣ್ಣಿಸಿದ್ದಾರೆ.
ಸಿಎಂ ಸಿದ್ದರಾಮಯ್ಯನವರು (CM Siddaramaiah) ಇಂದು ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, ಇದು ಜನಪರವಾದ ಬಜೆಟ್ ಆಗಿದೆ. ಈ ಬಾರಿಯ ಬಜೆಟ್ ಬಡವರ ಹಾಗೂ ಶ್ರಮಿಕರ ಪರವಾಗಿದ್ದು, ಸರ್ವತೋಮುಖ ಅಭಿವೃದ್ಧಿಗಾಗಿ ನೀಡಲಾಗಿದೆ. ಬಸವಣ್ಣನವರ ತತ್ವ ಆದರ್ಶಗಳೊಂದಿಗೆ, ಮಹಾತ್ಮ ಗಾಂಧಿಜೀಯವರು ಕಂಡಂತಹ ಕನಸನ್ನು ನಮ್ಮ ಸರ್ಕಾರ ಈಡೇರಿಸುತ್ತಿದೆ. ಸಿಎಂ ಐತಿಹಾಸಿಕ ದಾಖಲೆಯ ಬಜೆಟ್ ಮಂಡಿಸಿದ್ದು, ಅವರಿಗೆ ಭಗವಂತ ಉತ್ತಮ ಆರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದರು.ಇದನ್ನೂ ಓದಿ: ಈ ವರ್ಷ ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಅನುದಾನ
ರಾಜ್ಯದ ಬಡವರ ಹಸಿವು ನೀಗಿಸುವ ಉದ್ದೇಶದಿಂದ ಆರಂಭಿಸಲಾದ ಅನ್ನಭಾಗ್ಯ ಯೋಜನೆಯಡಿ ಇದುವರೆಗೂ ಹೆಚ್ಚುವರಿ 5 ಕೆ.ಜಿ ಆಹಾರ ಧಾನ್ಯಕ್ಕೆ ಪರ್ಯಾಯವಾಗಿ ಸಹಾಯಧನ ನೀಡಲಾಗುತ್ತಿತ್ತು. ಇದೀಗ ಸಹಾಯಧನದ ಬದಲಾಗಿ 5 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು. ಇದರಿಂದ 4.21 ಕೋಟಿ ಫಲಾನುಭವಿಗೆ ಹೆಚ್ಚುವರಿ ಅಕ್ಕಿ ಲಭ್ಯವಾಗಲಿದೆ ಎಂದು ಹೇಳಿದರು.
ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸಲು ತಂತ್ರಜ್ಞಾನವನ್ನು ಗರಿಷ್ಠ ಬಳಕೆ ಮಾಡಲಾಗುವುದು. ಇದಕ್ಕಾಗಿ ಒಟ್ಟಾರೆ 5 ಕೋಟಿ ರೂ. ವೆಚ್ಚದಲ್ಲಿ ಸಗಟು ಗೋಧಾಮುಗಳಿಗೆ ಸಿಸಿಟಿವಿ ಅಳವಡಿಕೆ, ಜಿಪಿಎಸ್ ಆಧಾರಿತ ವಾಹನ ಟ್ರ್ಯಾಕಿಂಗ್ ವ್ಯವಸ್ಥೆ ಮತ್ತು ಕಮಾಂಡ್ ಕಂಟ್ರೋಲ್ ಸೆಂಟರ್ ಸ್ಥಾಪಿಸಲಾಗುವುದು.
80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮಾತ್ರ ಇರುವ ಮನೆಗಳಿಗೆ ಆಹಾರ ಧಾನ್ಯಗಳನ್ನು ತಲುಪಿಸಲು ಹಿಂದಿನ ವರ್ಷ ಅನ್ನ-ಸುವಿಧಾ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ 2 ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದ್ದು, 75 ವಯಸ್ಸಿನ ಮೇಲ್ಪಟ್ಟ ಹಿರಿಯ ನಾಗರಿಕರು ಮಾತ್ರ ಇರುವ ಮನೆಗಳಿಗೂ ಈ ಸೇವೆ ವಿಸ್ತರುಸಲಾಗುವುದು. ಇದರಿಂದ 3.30 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ.
ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಮರ್ಪಕವಾಗಿ ನಿಗಾವಹಿಸಲು ಸಾಧ್ಯವಾಗುವಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ತೂಕದ ಯಂತ್ರ ಮತ್ತು ಪಾಯಿಂಟ್ ಆಫ್ ಸೇಲ್ ಸಿಸ್ಟಮ್‌ಗಳನ್ನು ಸಾರ್ವಜನಿಕ ವಿತರಣಾ ಪದ್ಧತಿಯನ್ನು ಐಟಿ ವ್ಯವಸ್ಥಯೊಂದಿಗೆ ಸಂಯೋಜಿಸಲಾಗುವುದು.
ಅನ್ನಭಾಗ್ಯ ಯೋಜನೆಯ ಸಗಟು ಲಾಭಾಂಶ ಪ್ರತಿ ಕ್ವಿಂಟಾಲ್ 35 ರೂ.ಗಳಿಂದ 45 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ.ಇದನ್ನೂ ಓದಿ: Women’s Day | ಈ ಬಾರಿಯ ಥೀಮ್ – ಆಕ್ಸಲರೇಟ್ ಆಕ್ಷನ್ ಎಂದರೇನು?