ರಾಮನಗರ: ಸುಗಮ ಸಂಚಾರಕ್ಕೆ ಅನುಕೂಲವಾಗಬೇಕಿದ್ದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ (Mysuru Bengaluru Expressway) ಈಗ ಓವರ್ ಸ್ಪೀಡ್ ಸೇರಿದಂತೆ ಇನ್ನಿತರ ಕಾರಣಗಳಿಂದಾಗಿ ಅಪಘಾತಗಳ (Accidents) ಹಾಟ್‌ಸ್ಪಾಟ್ ಆಗಿ ಪರಿಣಮಿಸಿದೆ.
Advertisement
ಸೆಪ್ಟೆಂಬರ್ ಮೊದಲ ವಾರದಿಂದ ಎಕ್ಸ್‌ಪ್ರೆಸ್ ವೇ ಮೊದಲ ಹಂತದ ರಸ್ತೆಯಲ್ಲಿ ವಾಹನಗಳು ಸಂಚರಿಸಲು ಆರಂಭಿಸಿದ್ದು, ಅಪಘಾತ ಪ್ರಕರಣಗಳು (Road Accident) ಹೆಚ್ಚಾಗುತ್ತಿವೆ. ರಾಮನಗರದಿಂದ ಚನ್ನಪಟ್ಟಣದ ಬೈರಾಪಟ್ಟಣದವರೆಗೂ ಬೈಪಾಸ್ ನಿರ್ಮಿಸಲಾಗಿದೆ. ಇದರ ಪಕ್ಕದಲ್ಲಿನ ಸರ್ವಿಸ್ ರಸ್ತೆಯಲ್ಲಿಯೇ ಅತೀ ಹೆಚ್ಚಿನ ಅಪಘಾತಗಳು ನಡೆದಿವೆ. ಇಲ್ಲಿ ಸರಿಯಾದ ಎಂಟ್ರಿ ಹಾಗೂ ಎಕ್ಸಿಟ್‌ಗಳನ್ನು ನೀಡದಿರುವ ಕಾರಣ ಸರ್ವಿಸ್ ರಸ್ತೆಗಳಲ್ಲಿಯೂ ಓವರ್‌ಸ್ಪೀಡ್ ಸರ್ವೇ ಸಾಮಾನ್ಯವಾಗಿದೆ. ಇದನ್ನೂ ಓದಿ: ಇಡೀ ಶೋ ಬುಕ್ ಮಾಡಿ, ಫ್ಯಾಮಿಲಿ ಸಮೇತ ಕಾಂತಾರ ನೋಡಿದ ದಾವಣಗೆರೆ ಪೊಲೀಸರು
Advertisement
Advertisement
ಹೀಗಾಗಿ ರಾಮನಗರ ಸಂಚಾರ ಪೊಲೀಸ್ ಠಾಣೆ (Traffic Police) ವ್ಯಾಪ್ತಿಯಲ್ಲಿನ ಬೈಪಾಸ್‌ನಲ್ಲಿಯೇ 6 ಮಂದಿ ಮೃತಪಟ್ಟಿದ್ದು, 8 ಮಂದಿ ಗಾಯಗೊಂಡಿದ್ದಾರೆ. ಇಂದು ಕೂಡಾ ರಾಮನಗರದಿಂದ ಮಾಗಡಿ ಕಡೆಗೆ ಹೋಗುತ್ತಿದ್ದ ಕುಮಾರ್ ಎಂಬಾತನಿಗೆ ಬೆಂಗಳೂರಿನಿಂದ ಮೈಸೂರು ಕಡೆಗೆ ಸರ್ವೀಸ್ ರಸ್ತೆಯಲ್ಲಿ ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಎರಡು ಕಾಲುಗಳು ತುಂಡಾಗಿವೆ. ಕೂಡಲೇ ಗಾಯಾಳುವನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ನಿರಂತರ ಅಪಘಾತದಿಂದ ರೊಚ್ಚಿಗೆದ್ದ ಗ್ರಾಮಸ್ಥರು ಕೆಂಪೇಗೌಡನ ದೊಡ್ಡಿ ಬಳಿ ದಶಪಥ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ಮೊದಲು ತಮ್ಮ ಮನೆ ಸರಿಮಾಡಿಕೊಳ್ಳಲಿ – ಕರಂದ್ಲಾಜೆ
Advertisement
ಸರ್ವೀಸ್ ರಸ್ತೆಯಲ್ಲಿ ರೋಡ್ ಹಂಪ್ ಹಾಕದೇ ಇರುವುದು ಇದಕ್ಕೆ ಕಾರಣವಾಗಿದೆ. ಕೂಡಲೇ ಡಿಬಿಎಲ್ ಕಂಪನಿಯವರು ಸ್ಥಳಕ್ಕೆ ಬರುವಂತೆ ಆಗ್ರಹಿಸಿದ್ದಾರೆ. ಗ್ರಾಮಸ್ಥರ ಪ್ರತಿಭಟನೆಯಿಂದ ಹೆದ್ದಾರಿಯಲ್ಲಿ ಸುಮಾರು 2 ಕಿ.ಮೀ ನಷ್ಟು ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಥಳಕ್ಕೆ ಬಂದ ರಾಮನಗರ ಗ್ರಾಮಾಂತರ ಪೊಲೀಸರು ಗ್ರಾಮಸ್ಥರ ಮನವೊಲಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಸಮಸ್ಯೆಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.