ಕೋಲಾರ: ಯುವತಿಯ ಮೇಲೆ ಇಬ್ಬರು ಯುವಕರು ಅತ್ಯಾಚಾರವೆಸಗಿ ಮೊಬೈಲ್ ನಲ್ಲಿ ಸೆರೆ ಹಿಡಿದು ಬೆದರಿಕೆ ನೀಡುತ್ತಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶ್ರೀನಿವಾಸಪುರ ಪಟ್ಟಣದ ನಿವಾಸಿಯಾಗಿರೋ ಯುವತಿಯ ಮೇಲೆ ಅತ್ಯಾಚಾರವೆಸಗಿದ ಯುವಕರು ಬಳಿಕ ಕಿರುಕುಳ ನೀಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳ ಹಿಂದೆ ಯುವತಿಗೆ ಜ್ಯೂಸ್ ನಲ್ಲಿ ಮತ್ತು ಬರುವ ಅಂಶ ಸೇರಿಸಿ ಅತ್ಯಾಚಾರವೆಸಗಿದ್ದರು. ಯುವಕರು ಅತ್ಯಾಚಾರದ ದೃಶ್ಯಗಳನ್ನು ತಮ್ಮ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿ ಯುವತಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು.
Advertisement
Advertisement
ಯುವಕರು ನಾಲ್ಕು ವರ್ಷಗಳ ಹಿಂದೆಯೇ ಹಿರಿಯರ ಸಮ್ಮುಖದಲ್ಲಿ ನ್ಯಾಯ ಪಂಚಾಯತಿ ಮಾಡಿ ಸಮಾಧಾನ ಮಾಡಿದ್ದರು. ನಂತರ ಪೋಷಕರು ತನ್ನ ಮಗಳನ್ನು ಮದುವೆ ಮಾಡಿಸಿ ಹೈದರಾಬಾದ್ ಗೆ ಕಳುಹಿಸಿದ್ದರು. ಈ ಸಂದರ್ಭದಲ್ಲಿ ಕಾಮುಕರು, ಯುವತಿಯ ಮೇಲೆ ಅತ್ಯಾಚಾರವೆಸಗಿದ ವಿಡಿಯೋವನ್ನು ಆಕೆಯ ಗಂಡನಿಗೆ ವಾಟ್ಸಪ್ ನಲ್ಲಿ ಕಳುಹಿಸಿ ಕಿರುಕುಳ ನೀಡುತ್ತಿದ್ದರು. ಈ ವಿಡಿಯೋವನ್ನು ನೋಡಿದ ಯುವತಿ ಗಂಡ ಆಕೆಗೆ ವಿಚ್ಛೇದನ ಕೂಡ ನೀಡಿದ್ದನು.
Advertisement
ತನ್ನ ಗಂಡ ವಿಚ್ಛೇದನ ನೀಡಿದ್ದರೂ ಯುವಕರು ಬಿಡದೆ ಯುವತಿಗೆ ಹಿಂಸೆ ನೀಡುತ್ತಿದ್ದಾರೆ. ವಿಡಿಯೋ ತೋರಿಸಿ ವಾಟ್ಸಪ್, ಫೇಸ್ ಬುಕ್ ಗಳಲ್ಲಿ ಹರಿ ಬಿಡುವ ಮೂಲಕ ಬೆದರಿಕೆ ಹಾಕುತ್ತಿದ್ದಾರೆ.
Advertisement