Advertisements

ಚಿಕ್ಕೋಡಿ: ಸಾರಾಯಿ ಕುಡಿಬೇಡ ಅಂತ ಬುದ್ದಿ ಹೇಳಿದ್ದಕ್ಕೆ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದಲ್ಲಿ ನಡೆದಿದೆ.
Advertisements
ಮನ್ಸೂರ್ ಇಲಾಹಿ ಮುಲ್ಲಾ(50) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಶನಿವಾರ ತಡರಾತ್ರಿ ಹೆಂಡತಿ ಮಗನೊಂದಿಗೆ ಇದೇ ವಿಚಾರಕ್ಕೆ ಮನ್ಸೂರ್ ಜಗಳವಾಡಿದ್ದ. ಸಾರಾಯಿ ಕುಡಿಯುವ ವಿಷಯಕ್ಕೆ ದಿನನಿತ್ಯ ಮನೆಯಲ್ಲಿ ಗಲಾಟೆ ಆಗುತ್ತಿತ್ತು. ಯಾವುದೇ ಕಾರಣಕ್ಕೂ ಹಣ ಕೊಡಲ್ಲ ಕುಡಿಯಬೇಡ ಅಂತ ಹೇಳಿದ್ದಕ್ಕೆ ಮನ್ಸೂರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹೊಟ್ಟೆ ಹರಿದುಕೊಂಡಿದ್ದ ಕೋತಿಗೆ ಯಶಸ್ವಿ ಶಸ್ತ್ರಚಿಕಿತ್ಸೆ
Advertisements
ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆಯಿಂದ ಸ್ಥಳಕ್ಕೆ ಖಡಕಲಾಟ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಖಡಕಲಾಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಭೀಕರ ಅಪಘಾತ- 7 ಮಂದಿ ದುರ್ಮರಣ
Live Tv
Advertisements
Advertisements