ಆನೇಕಲ್: ಇಲ್ಲಿನ ಕಿತ್ತಗಾನಹಳ್ಳಿಯಲ್ಲಿ (Kittaganahalli) ನಡೆದಿದ್ದ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಗೊಂಡಿದ್ದ ಓರ್ವ ವ್ಯಕ್ತಿ ಇಂದು (ಜ.10) ಸಾವನ್ನಪ್ಪಿದ್ದಾನೆ.
ಮೃತ ವ್ಯಕ್ತಿಯನ್ನು ತಮಿಳುನಾಡು ಮೂಲದ ವಿಷ್ಣು ಜಯರಾಜ್(30) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್ ಪುತ್ರ ಆತ್ಮಹತ್ಯೆ
ಸಿಲಿಂಡರ್ ಸ್ಫೋಟದ ವೇಳೆ ಮನೆಯಲ್ಲಿ ವಾಸವಾಗಿದ್ದ ಇಬ್ಬರು ಗಾಯಗೊಂಡಿದ್ದರು. ಇಬ್ಬರ ಪೈಕಿ ಓರ್ವ ಕಟ್ಟಡದ ಎರಡನೇ ಮಹಡಿಯಿಂದ ಬಿದ್ದು ಗಾಯಗೊಂಡಿದ್ದ. ಗಾಯಾಳುಗಳಿಗೆ ನಾರಾಯಣ ಹೆಲ್ತ್ ಸಿಟಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ವಿಷ್ಣು ದೇಹದ ಬಹುತೇಕ ಭಾಗಗಳಿಗೆ ಗಾಯವಾಗಿ, ಚಿಂತಾಜನಕ ಸ್ಥಿತಿಯಲ್ಲಿದ್ದ. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ಘಟನೆ ಏನು?
ಜ.06 ರಂದು ಬೊಮ್ಮಸಂದ್ರ (Bommasandra) ಸಮೀಪದ ಕಿತ್ತಗಾನ ಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡಿತ್ತು. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕಟ್ಟಡದ ಒಂದು ಮಹಡಿ ಸಂಪೂರ್ಣ ಛಿದ್ರವಾಗಿತ್ತು. ಜಯನಗರ ಮೂಲದ ಸುನಿಲ್ ಎಂಬವರಿಗೆ ಸೇರಿದ್ದ ಕಟ್ಟಡದಲ್ಲಿ ಇಬ್ಬರು ವಾಸವಾಗಿದ್ದರು. ಕೆಲಸಕ್ಕೆ ಹೋಗಲು ಒಬ್ಬರು ಸ್ನಾನ ಮಾಡುತ್ತಿದ್ದರಂತೆ. ಇದೇ ವೇಳೆ ಸಿಲಿಂಡರ್ ಸ್ಫೋಟಗೊಂಡಿದ್ದು, ಇನ್ನೋರ್ವ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಎರಡನೇ ಅಂತಸ್ತಿನಿಂದ ಕೆಳಗೆ ಬಿದ್ದಿದ್ದ. ಸ್ಫೋಟದ ತೀವ್ರತೆಗೆ ಕಟ್ಟಡದ ಹಾಲೋ ಬ್ಲಾಕ್‌ಗಳು ಹಾರಿಹೋಗಿದ್ದವು. ಜೊತೆಗೆ ಬಿಲ್ಡಿಂಗ್ ನಾಲ್ಕು ಪಿಲ್ಲರ್‌ಗಳು ಕೂಡ ಛಿದ್ರಗೊಂಡಿದ್ದವು. ಇದರ ಪರಿಣಾಮ ನಾಲ್ಕು ಬಿಲ್ಡಿಂಗ್, 3 ಕಾರು, 6 ದ್ವಿಚಕ್ರ ವಾಹನಗಳು ಹಾನಿಗೊಳಗಾಗಿದ್ದವು.ಇದನ್ನೂ ಓದಿ: ವೈಕುಂಠ ಏಕಾದಶಿ- ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‌ಕುಮಾರ್