ಮಂಗಳೂರು: ಭಾರೀ ಮಳೆಯಿಂದಾಗಿ ಸೇತುವೆ ದಾಟುತ್ತಿದ್ದ ಸಂದರ್ಭದಲ್ಲಿ ಪಿಕಪ್ ವಾಹನವೊಂದು ನೀರಿನಲ್ಲಿ ಕೊಚ್ಚಿ ಹೋದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ನಡೆದಿದೆ.
ಹೌದು. ಪಶ್ವಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಹಾಗೂ ಸುಳ್ಯ ಪರಿಸರದಲ್ಲಿ ಹೊಳೆ, ಹಳ್ಳ-ಕೊಳ್ಳಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ಸುಬ್ರಹ್ಮಣ್ಯ ಸಮೀಪದ ಕಲ್ಮಕಾರಿನ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ.
ಕಲ್ಮಕಾರು ಹೊಳೆಗೆ ನಿರ್ಮಿಸಲಾದ ಸೇತುವೆಯ ಮೇಲೆ ತೆಂಗಿನಕಾಯಿ ಲೋಡ್ ಮಾಡಿಕೊಂಡು ಪಿಕಪ್ ವಾಹನವೊಂದು ಚಲಿಸುತ್ತಿತ್ತು. ಈ ವೇಳೆ ಹೊಳೆಯಲ್ಲಿ ಏಕಾಏಕಿ ನೀರಿನ ರಭಸ ಹೆಚ್ಚಾಗಿದ್ದು, ಸೇತುವೆ ದಾಟುತ್ತಿದ್ದ ಪಿಕಪ್ ವಾಹನ ನೀರು ಪಾಲಾಗಿದೆ.
ಕೂಡಲೇ ಸಾರ್ವಜನಿಕರು ವಾಹನ ಚಾಲಕನನ್ನು ರಕ್ಷಣೆ ಮಾಡಿದ್ದಾರೆ. ಕಳೆದ ಎರಡು ವರ್ಷಗಳಿಂದ ಪ್ರವಾಹದಿಂದಾಗಿ ಕಲ್ಮಕಾರು ಪ್ರದೇಶದಲ್ಲಿ ಸಾಕಷ್ಟು ಹಾನಿ ಸಂಭವಿಸಿತ್ತು. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಕೇಸ್ – ಮೃತ ನೌಕರನ ಕುಟುಂಬಸ್ಥರಿಗೆ ಈಶ್ವರಪ್ಪ ಸಾಂತ್ವನ