ಬೆಂಗಳೂರು: PSI ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣವು ಭಾರೀ ಸದ್ದು ಮಾಡುತ್ತಿದ್ದು, ಸಿಐಡಿ ಅಧಿಕಾರಿಗಳು ಬೆಂಗಳೂರಿನ ಪರೀಕ್ಷಾ ಕೇಂದ್ರಗಳತ್ತ ಹದ್ದಿನ ಕಣ್ಣು ಹಾಯಿಸಿದ್ದಾರೆ. ಈ ಹೊತ್ತಿನಲ್ಲಿ ನಗರ ಪೊಲೀಸ್ ಆಯುಕ್ತರ ಕೇಂದ್ರ ಕಚೇರಿಯಲ್ಲೇ ಪೊಲೀಸ್ ಪೇದೆಯೊಬ್ಬ ಸಿಕ್ಕಿಬಿದ್ದಿದ್ದಾನೆ.
Advertisement
ಪೇದೆ ಗಜೇಂದ್ರನನ್ನು ಸಿಐಡಿ ಬಂಧಿಸಿದೆ. ನಗರ ಪೊಲೀಸ್ ಆಯುಕ್ತರ ಕೇಂದ್ರ ಕಚೇರಿಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಜೇಂದ್ರ ಕದ್ದು ಕದ್ದು ಎಕ್ಸಾಂ ಬರೆದು ಪಾಸಾಗಿದ್ದ. ಗಜೇಂದ್ರ ಇನ್ ಸರ್ವಿಸ್ ಖೋಟಾದಡಿ ಫಸ್ಟ್ ರ‍್ಯಾಂಕ್ ಪಡೆದಿದ್ದ. ಸ್ಟಾರ್ ಹಾಕಿಕೊಂಡು ಬರೋದಕ್ಕೂ ತಯಾರಾಗಿದ್ದ. ಅಷ್ಟರಲ್ಲೇ ಅಕ್ರಮ ಎಸಗಿ ಸಿಕ್ಕಿ ಬಿದ್ದಿದ್ದಾನೆ. ಇದನ್ನೂ ಓದಿ: PSI ಟಾಪರ್ಸ್‍ಗಳ ಅಸಲಿ ಮುಖವಾಡ ಬಯಲು – ತಾತ್ಕಾಲಿಕ ಪಟ್ಟಿಯಲ್ಲಿ ಬೆಂಗ್ಳೂರಿನ 172 ಮಂದಿ ಆಯ್ಕೆ!
Advertisement
ಕೆಲಸ ಮುಗಿಸಿ ಮನೆಗೆ ಹೋಗಲು ತಯಾರಿಯಾಗುತ್ತಿದ್ದ ವೇಳೆ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿಯೇ ಅಧಿಕಾರಿಗಳು ಬಂಧಿಸಿದ್ದಾರೆ.