ಇಸ್ಲಾಮಾಬಾದ್: ಭಾರತವನ್ನು ಬೆಂಬಲಿಸುತ್ತಿರುವ ಬಲಿಷ್ಠ ರಾಷ್ಟ್ರವೊಂದು ಪಾಕಿಸ್ತಾನದ ವಿರುದ್ಧ ಕೋಪಗೊಂಡಿದೆ ಎಂದು ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಹೇಳಿದ್ದಾರೆ.
ತಮ್ಮ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಯಾದ ಬಳಿಕ ಇಮ್ರಾನ್ ಖಾನ್ ಈ ಹೇಳಿಕೆ ನೀಡಿದ್ದಾರೆ. ಇಸ್ಲಾಮಾಬಾದ್ ಭದ್ರತಾ ವ್ಯವಸ್ಥೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ವತಂತ್ರ ವಿದೇಶಾಂಗ ನೀತಿಯು ದೇಶಕ್ಕೆ ನಿರ್ಣಾಯಕವಾಗಿದೆ. ಪಾಕಿಸ್ತಾನವು ತನ್ನ ಗರಿಷ್ಠ ಸಾಮರ್ಥ್ಯವನ್ನು ಮುಟ್ಟಲು ಸಾಧ್ಯವಾಗದಿರಲು ಕಾರಣ ಇತರ ಶಕ್ತಿಶಾಲಿ ರಾಷ್ಟ್ರಗಳ ಮೇಲಿನ ಅವಲಂಬನೆ ಎಂದು ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ನೀವು ಪ್ರಧಾನಿಯಾಗಿಲ್ಲದಿದ್ದಾಗ ಪಾಕಿಸ್ತಾನ ಅದ್ಭುತವಾಗಿತ್ತು: ಇಮ್ರಾನ್‌ಗೆ ಮಾಜಿ ಪತ್ನಿ ತರಾಟೆ
ಸ್ವತಂತ್ರ ವಿದೇಶಾಂಗ ನೀತಿಯನ್ನು ಹೊಂದಿರದ ದೇಶವು ತನ್ನ ಜನತೆಯ ಹಿತಾಸಕ್ತಿಯನ್ನು ಕಾಯ್ದುಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಇಮ್ರಾನ್ ಖಾನ್ ಒತ್ತಿ ಹೇಳಿದ್ದಾರೆ.
ವಿದೇಶಿ ನೆರವಿನ ಮೂಲಕ ಇತರ ದೇಶಗಳ ಇಚ್ಛೆಗೆ ಮಣಿಯುವುದಕ್ಕಿಂತ ರಾಷ್ಟ್ರದ ಹಿತಾಸಕ್ತಿಗಳನ್ನು ಧ್ಯೇಯವಾಗಿಟ್ಟುಕೊಂಡು ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಅತ್ಯಂತ ಮುಖ್ಯ ಎಂದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಫಲಿತಾಂಶ ಏನೇ ಬರಲಿ, ಇನ್ನೂ ಬಲಿಷ್ಠವಾಗಿ ಮರಳುತ್ತೇನೆ: ಇಮ್ರಾನ್ ಖಾನ್
ಅಮೆರಿಕವನ್ನು ಉಲ್ಲೇಖಿಸಿ ಮಾತನಾಡಿದ ಅವರು, ನಾನು ಇತ್ತೀಚಿನ ರಷ್ಯಾಗೆ ಭೇಟಿ ಕೊಟ್ಟಿದ್ದಕ್ಕೆ ಪ್ರಬಲ ದೇಶ ಅಸಮಾಧಾನವನ್ನು ವ್ಯಕ್ತಪಡಿಸಿದೆ. ಮತ್ತೊಂದೆಡೆ ಮಿತ್ರರಾಷ್ಟ್ರವಾದ ಭಾರತವು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳಲು ಸಹಕರಿಸುತ್ತಿದೆ ಎಂದಿದ್ದಾರೆ.
ಉಕ್ರೇನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆ ಆರಂಭಿಸಿದ ನಂತರ ಫೆ.24ರಂದು ಇಮ್ರಾನ್ ಖಾನ್ ಕ್ರೆಮ್ಲಿನ್‌ಗೆ ತೆರಳಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಿದ್ದರು. ಇದನ್ನೂ ಓದಿ: ಯಾರೀ ಶೆಹಬಾಜ್ ಷರೀಫ್- ಇವರೇ ಪಾಕಿಸ್ತಾನದ ಮುಂದಿನ ಪ್ರಧಾನಿ?