ಚಾಮರಾಜನಗರ: ಬೆಟ್ಟದ ಮೇಲಿಂದ ಜಿಗಿದು ರಿಯಲ್ ಎಸ್ಟೇಟ್ ಉದ್ಯಮಿ (Real Estate) ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ (Chamarajanagara) ಜಿಲ್ಲೆಯ ಯಳಂದೂರು (Yelandur) ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ (Biligirirangana Hills) ನಡೆದಿದೆ.
ಮಹದೇವನಾಯಕ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ. ಬೆಟ್ಟದ ಕಡಿದಾದ ಜಾಗದಲ್ಲಿ ಸಿಲುಕಿದ್ದ ಮಹದೇವನಾಯಕ ಅವರ ಶವವನ್ನು ಶನಿವಾರ ಡ್ರೋನ್ ಬಳಸಿ ಪತ್ತೆ ಮಾಡಲಾಗಿದೆ. ಮಹದೇವನಾಯಕ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಕವಲಂದೆ ಕುಂಬಾರಹಳ್ಳಿಯ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು. ಮಹದೇವನಾಯಕ ಮೇ 5 ರಂದು ನಾಪತ್ತೆಯಾಗಿದ್ದಾರೆ ಎಂದು ಕವಲಂದೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದನ್ನೂ ಓದಿ: ವಿಚ್ಛೇದಿತ ಮಹಿಳೆಯೊಂದಿಗೆ ಯುವಕನ ಲವ್ವಿ ಡವ್ವಿ – ಗರ್ಭಿಣಿ ಆದ್ಮೇಲೆ ಟೀಚರ್‌ಗೆ ಕೈಕೊಟ್ಟು ಜೂಟ್!
ಜೂ.6 ರಂದು ಬಿಳಿಗಿರಿರಂಗನಬೆಟ್ಟದ ಬಳಿ ಬೈಕ್ ಪತ್ತೆಯಾಗಿದೆ. ಈ ಜಾಡನ್ನು ಹಿಡಿದ ಪೊಲೀಸರು ಶನಿವಾರ ಡ್ರೋನ್ ಕ್ಯಾಮೆರಾ ಬಳಸಿ ಹುಡುಕಾಟ ನಡೆಸಿದ್ದಾರೆ. ಡ್ರೋನ್ ಕ್ಯಾಮೆರಾದಲ್ಲಿ ಕಮರಿನ ನಡುವೆ ಶವ ಸಿಲುಕಿರುವುದು ಪತ್ತೆಯಾಗಿದೆ. ಶವದ ಮೇಲಿನ ಬಟ್ಟೆಯನ್ನು ಸಂಬಂಧಿಕರು ಗುರುತಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹೆಚ್‌ಡಿಕೆ, ಜೋಶಿ, ಶೋಭಾ, ಸೋಮಣ್ಣಗೆ ಮಂತ್ರಿ ಸ್ಥಾನ ಫಿಕ್ಸ್