– ವಿನಯ್‌ಗೆ ನನ್ನ ಫ್ರೆಂಡ್‌ಶಿಪ್ ಬೇಡ ಅಂದ್ರೆ ನೇರವಾಗಿ ಹೇಳಿಬಿಡಲಿ ಎಂದ ರಜತ್
ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣ ಈಗ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ – ರಜತ್ ಕಿಶನ್ (Rajath Kishan) ಸ್ನೇಹದಲ್ಲಿ ಬಿರುಕು ಮೂಡಿಸಿದೆ ಎಂದು ಹೇಳಲಾಗುತ್ತಿದೆ.
ಹೌದು. ಬಿಗ್ ಬಾಸ್ (Bigg Boss Kannada) ಮಾಜಿ ಸ್ಪರ್ಧಿಗಳಾದ ರಜತ್ ಮತ್ತು ವಿನಯ್ ಗೌಡ (Vinay Gowda) ಮಚ್ಚು ಹಿಡಿದು ರೀಲ್ಸ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ರು. ಪೋಸ್ಟ್ ಗಮನಿಸಿದ್ದ ಬಸವೇಶ್ವರ ನಗರ ಠಾಣೆ ಪೊಲೀಸರು ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧನ ಕೂಡ ಮಾಡಿದ್ರು. ನಂತರ ಪರಪ್ಪನ ಅಗ್ರಹಾರ ಜೈಲಿಗೂ ಕಳುಹಿಸಲಾಗಿತ್ತು. ಆ ನಂತರ ವಿನಯ್ ವಿಡಿಯೋ ಮಾಡಿ ರೀಲ್ಸ್ ಮಾಡಿದ್ದು ತಪ್ಪು, ಇನ್ಮುಂದೆ ಜೀವನದಲ್ಲಿ ಯಾವತ್ತೂ ರೀಲ್ಸ್ ಮಾಡಲ್ಲ ಅಂತಾ ಹೇಳಿಕೆ ಕೂಡ ಕೊಟ್ಟಿದ್ರು. ಆದ್ರೆ ಇಲ್ಲಿವರೆಗೂ ರಜತ್ ಮಾತ್ರ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಇದನ್ನೂ ಓದಿ: ಒಬಿಸಿ ಮೀಸಲಾತಿ ಪ್ರಮಾಣವನ್ನು 32% ರಿಂದ 51%ಕ್ಕೆ ಏರಿಸಿ – ಆಯೋಗದ ಶಿಫಾರಸು ಏನು? ಯಾವ ಜಾತಿಗೆ ಎಷ್ಟು ಮೀಸಲಾತಿ ಏರಿಕೆ?
ಇದೇ ಮೊದಲ ಬಾರಿಗೆ ʻಪಬ್ಲಿಕ್ ಟಿವಿʼಯೊಂದಿಗೆ ರಜತ್ ರೀಲ್ಸ್ ಮಾಡಿದ್ದು ಹೇಗೆ ಏನೆಲ್ಲಾ ಆಯ್ತು ಅನ್ನೋ ಬಗ್ಗೆ ರಿಯಾಕ್ಟ್ ಮಾಡಿದ್ದಾರೆ. ಅಕ್ಷಯ್ ಸ್ಟುಡಿಯೋದಲ್ಲಿ ಖಾಸಗಿ ಕಾರ್ಯಕ್ರಮ ಇತ್ತು. ಕಾರ್ಯಕ್ರಮ ಮುಗಿಸಿ ಹೊರಗೆ ಬಂದ ವೇಳೆ ನಾನೇ ರೀಲ್ಸ್ ಮಾಡೋಣ ಅಂತ ವಿನಯ್‌ಗೆ ಹೇಳಿದ್ದೆ. ಅಲ್ಲೇ ಸೆಟ್‌ನಲ್ಲಿದ್ದ ಫೈಬರ್ ಮಚ್ಚು ತಗೊಂಡು ರೀಲ್ಸ್ ಮಾಡಿ ಇಬ್ಬರು ಇನ್‌ಸ್ಟಾ ಅಕೌಂಟ್‌ನಲ್ಲಿ ಪೋಸ್ಟ್ ಮಾಡಿದ್ವಿ. ನಾವು ಫೈಬರ್ ಮಚ್ಚು ಬಳಸಿ ರೀಲ್ಸ್ ಮಾಡಿದ್ದು, ಆಸಲಿ ಮಚ್ಚು ಬಳಸಿಲ್ಲ. ಮಚ್ಚು ಹಿಡಿದು ರೀಲ್ಸ್ ಮಾಡೋದು ತಪ್ಪು ಅಂತ ಗೊತ್ತಿರಲಿಲ್ಲ, ಯಾರು ಕೂಡ ಮುಂದೆ ಈ ರೀತಿ ಮಾಡಬೇಡಿ ಅಂತ ಮನವಿ ಕೂಡ ಮಾಡಿದ್ದಾರೆ. ಇದನ್ನೂ ಓದಿ: ದೇಶದ ಇತಿಹಾಸದಲ್ಲಿ ಮೊದಲು; ರಾಜ್ಯಪಾಲರು-ರಾಷ್ಟ್ರಪತಿಗಳ ಸಮ್ಮತಿಯಿಲ್ಲದೆ 10 ಕಾಯ್ದೆಗಳನ್ನ ಜಾರಿಗೊಳಿಸಿದ ತ.ನಾಡು ಸರ್ಕಾರ
ವಿನಯ್ ಬಗ್ಗೆ ಅಸಮಾಧಾನ:
ಮುಂದುವರಿದು ಮಾತನಾಡಿದ ರಜತ್, ಕಳೆದ 11 ವರ್ಷಗಳಿಂದ ನಾನು ವಿನಯ್, ಸ್ನೇಹಿತರು. ಬಿಗ್ ಬಾಸ್‌ಗೆ ಹೋಗೋಕು ಮುಂಚೆ ಪರಿಚಯ ಇತ್ತು. ಆದರೆ ರೀಲ್ಸ್ ಮಾಡಿ ಜೈಲಿಗೆ ಹೋಗಿ ಬಂದ ನಂತರ ಅವನೇ ಮಾಧ್ಯಮಗಳಿಗೆ ಮಾತಾಡೋದು ಬೇಡ ಅಂದ. ನಂತರ ಅವನೇ ಮೊದಲು ವಿಡಿಯೋ ಮಾಡಿ ಕ್ಷಮೆ ಕೇಳಿದ್ದಾನೆ. ಆಮೇಲೆ ನನ್ನಿಂದಲೇ ಇದೆಲ್ಲಾ ಆಯ್ತು ಅನ್ನೋ ತರ ನಡ್ಕೋತಿದ್ದಾನೆ. ಕಳೆದ ಒಂದು ವಾರದಿಂದ ಅವನ ಅಕೌಂಟ್‌ನಲ್ಲಿ ಕೆಲವರು ರಜತ್ ಫ್ರೆಂಡ್‌ಶಿಪ್ ಕಟ್ ಮಾಡು ಅಂತಾ ವಿನಯ್‌ಗೆ ಕಾಮೆಂಟ್ ಮಾಡ್ತಿದ್ದಾರೆ. ಆ ಕಾಮೆಂಟ್‌ಗಳಿಗೆ ವಿನಯ್ ಕೂಡ ಲೈಕ್ಸ್ ಕೊಡ್ತಿದ್ದಾನೆ. ಇದು ಸರಿಯಿಲ್ಲ, ನನ್ನ ಫ್ರೆಂಡ್‌ಶಿಪ್ ಬೇಡ ಅಂದ್ರೆ ನೇರವಾಗಿ ಹೇಳಿಬಿಡಲಿ. ಅದು ಬಿಟ್ಟು ಈ ರೀತಿ ಮಾಡೋದು ಸರಿಯಿಲ್ಲ ಅಂತ ವಿನಯ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಗೆಳತಿಯನ್ನು ಸೂಟ್‌ಕೇಸ್‌ನಲ್ಲಿ ಬಚ್ಚಿಟ್ಟು ಹಾಸ್ಟೆಲ್‌ಗೆ ತಂದು ಸಿಕ್ಕಿಬಿದ್ದ ಯುವಕ!