ಬೆಂಗಳೂರು: ರೌಡಿಶೀಟರ್‌ನನ್ನು ಅಟ್ಟಾಡಿಸಿ ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಸೂಲಿಬೆಲೆ (Sulibele) ಗ್ರಾಮದ ಜನತಾ ಕಾಲೋನಿ ಬಳಿ ತಡರಾತ್ರಿ ನಡೆದಿದೆ.
ಗ್ರಾಮದ ಖಲೀಂ ಉಲ್ಲಾಖಾನ್ (36) ಕೊಲೆಯಾದ ರೌಡಿ ಶೀಟರ್. ಖಲೀಂ ಉಲ್ಲಾಖಾನ್ ಫೋನ್‌ನಲ್ಲಿ ಮಾತಾಡುತ್ತಿದ್ದಾಗ ಬಂದ ಅಪರಿಚಿತರ ಗುಂಪು ಅಟ್ಟಾಡಿಸಿ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದಿದ್ದಾರೆ. 20 ಕ್ಕೂ ಅಧಿಕ ಭಾರಿ ಹೊಟ್ಟೆ ಭಾಗಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಇರಿದಿದ್ದಾರೆ ಎಂದು ತಿಳಿದು ಬಂದಿದೆ. ಕೊಲೆ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಮಂಗಳೂರಲ್ಲಿ ಸಿಸಿಬಿ ಪೊಲೀಸ್ ಕಾರ್ಯಾಚರಣೆ; ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ
ಮೃತದೇಹವನ್ನು ಹೊಸಕೋಟೆ ಸರ್ಕಾರಿ ಆಸ್ವತ್ರೆಗೆ ರವಾನಿಸಲಾಗಿದೆ. ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ರಸ್ತೆಬದಿ ಕಸ ಎಸೆದ ವೀಡಿಯೋ ವೈರಲ್ – ಗುಂಡು ಹಾರಿಸಿಕೊಂಡು ಗೋವಾದ ವಿದ್ಯಾರ್ಥಿ ಆತ್ಮಹತ್ಯೆ
