ದೇವಸ್ಥಾನದ ಮರದ ಕೆಳಗೆ ಮಹಿಳೆ ನಗ್ನ ಫೋಟೋಶೂಟ್ – ಇಂಡೋನೇಷ್ಯಾದಿಂದ ಗಡಿಪಾರು

Public TV
2 Min Read
Russia Women

ಜಕಾರ್ತ: ಪ್ರವಾಸಕ್ಕೆ ಬಂದಿದ್ದ ರಷ್ಯಾದ (Russia) ಇನ್ಸ್ಟಾಗ್ರಾಮ್ (Instagram) ತಾರೆಯೊಬ್ಬಳು, ದೇವಸ್ಥಾನದ ಮರದ ಕೆಳಗೆ ನಗ್ನ ಫೋಟೋಶೂಟ್ ಮಾಡಿಸಿದ್ದಕ್ಕಾಗಿ ಇಂಡೋನೇಷ್ಯಾದ (Indonesia) ಬಾಲಿಯಿಂದ ಗಡಿಪಾರಾಗಿದ್ದಾಳೆ. ಮಹಿಳೆ ನಗ್ನ ಫೋಟೋಶೂಟ್ ಮಾಡಿಸಿರುವುದು, ಬಾಲಿಯ ಹಿಂದೂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಹೇಳಿ, ತೀವ್ರ ಪ್ರತಿಭಟನೆಯ ನಂತರ ಇಂಡೋನೇಷ್ಯಾ ಸರ್ಕಾರ ಮಹಿಳೆಯನ್ನು ಗಡಿಪಾರು ಮಾಡಿದೆ.

ರಷ್ಯಾದ 40ರ ಹರೆಯದ ಮಹಿಳೆ ಲೂಯ್ಜಾ ಕೊಶ್ಯಾಕ್ ಬಾಲಿ ಪ್ರವಾಸ ಕೈಗೊಂಡಿದ್ದರು. ಬಾಲಿಯ (Bali) ಸುಂದರ ತಾಣಗಳಲ್ಲಿ ಕೆಲ ದಿನಗಳ ಕಾಲ ಕಳೆದ ಕೋಶ್ಯಾಕ್, ಬಾಲಿಯ ತಬನನ್ ದೇವಸ್ಥಾನ ವೀಕ್ಷಣೆಗೆ ಆಗಮಿಸಿದ್ದಳು. ಈ ವೇಳೆ ಭಾರೀ ಗಾತ್ರದ ಮರ ಈಕೆಯ ಕಣ್ಣಿಗೆ ಬಿದ್ದಿದೆ. ಇದೇ ಮರದ ಬಳಿ ನಗ್ನವಾಗಿ ನಿಂತು ಫೋಟೋಶೂಟ್ ಮಾಡಿಸಿಕೊಂಡಿದ್ದಾಳೆ. ಹಲವು ಫೋಟೋಗಳನ್ನು ತೆಗೆಸಿರುವ ಕೋಶ್ಯಾಕ್ ಅದನ್ನು ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾಳೆ. ಇದನ್ನೂ ಓದಿ: ಪ್ರವಾಸಕ್ಕೆ ತೆರಳಿದ್ದ ಮೂವರು ಯುವತಿಯರ ಭೀಕರ ಹತ್ಯೆ – ಈಕ್ವೆಡಾರ್‌ ಬೀಚ್‌ನಲ್ಲಿ ನಡೆದಿದ್ದೇನು?

Russia Women 2

ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದಂತೆ, ಬಾಲಿಯ ಹಿಂದೂ ಸಮುದಾಯದ ಜನ ಮಹಿಳೆ ವಿರುದ್ಧ ತಿರುಗಿಬಿದ್ದಿದ್ದಾರೆ. ಬಾಲಿ ಉದ್ಯಮಿ ನಿಲುಡಿಜೆಲಾಂಟಿಕ್ ತಮ್ಮ ಖಾತೆಯಲ್ಲಿ ಮಹಿಳೆಯ ನಗ್ನ ಫೋಟೋವನ್ನ ಹಂಚಿಕೊಂಡಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಲಿಯನ್ನು ಅಗೌರವಿಸುವ ಎಲ್ಲಾ ವಿದೇಶಿಗರೇ ಗಮನಿಸಿ, ?ಬಾಲಿ ನಮ್ಮ ನೆಲ, ನಿಮ್ಮದಲ್ಲ. ದೇವಸ್ಥಾನದ ಪವಿತ್ರ ಮರದ ಬುಡದಲ್ಲಿ ನಗ್ನ ಚಿತ್ರ ಪ್ರದರ್ಶಿಸಿ ನೀವು ಆರಾಮಾಗಿ ಇಲ್ಲಿ ಕಳೆಯಬಹುದು ಎಂದು ಭಾವಿಸಿದ್ದೀರಾ? ನಮ್ಮ ಸಂಸ್ಕೃತಿ, ಪದ್ಧತಿ, ದೇಶವನ್ನು ಗೌರವಿಸಲು ಸಾಧ್ಯವಿಲ್ಲ ಎಂದಾದರೆ ಹೊರನಡೆಯಿರಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Russia Women 1

ಮಹಿಳೆಯ ಫೋಟೋಶೂಟ್ ಖಂಡಿಸಿ ಬಾಲಿಯ ಹಿಂದೂ ಸಮುದಾಯ ತೀವ್ರ ಪ್ರತಿಭಟನೆ ನಡೆಸಿದ ಬಳಿಕ ಕಾರ್ಯಪ್ರವೃತ್ತರಾದ ಇಂಡೋನೇಷ್ಯಾ ಅಧಿಕಾರಿಗಳು, ಲೂಯ್ಜಾ ಕೋಶ್ಯಾಕ್ ಬಂಧಿಸಿದ್ದಾರೆ. ಇಷ್ಟೇ ಅಲ್ಲ ಮತ್ತೆ ಇಂಡೋನೇಷ್ಯಾ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ. ಇದನ್ನೂ ಓದಿ: ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಸೆಕ್ಸ್‌ – 6 ಮಂದಿ US ಶಿಕ್ಷಕಿಯರು ಅರೆಸ್ಟ್‌

ತಬನನ್ ದೇವಸ್ಥಾನದ ಆವರಣದಲ್ಲಿರುವ ಈ ಪವಿತ್ರ ಮರ ಸುಮಾರು 700 ವರ್ಷಗಳಷ್ಟು ಹಳೆಯ ಮರವಾಗಿದೆ. ಕಳೆದ ವರ್ಷ ರಷ್ಯಾದ ಯೋಗಪಟು ಇದೇ ಮರದ ಬುಡದಲ್ಲಿ ಫೋಟೋ ತೆಗೆದು ವಿವಾದ ಸೃಷ್ಟಿಸಿದ್ದರು.

Share This Article