-ಅಪ್ಪ-ಮಗ, ಅಣ್ಣ-ತಮ್ಮ ಸ್ಪರ್ಧೆ ಮಾಡ್ಬಹುದು, ಗಂಡ-ಹೆಂಡ್ತಿ ಯಾಕೆ ಸ್ಪರ್ಧಿಸಬಾರದು ಜೆಡಿಎಸ್‍ಗೆ ನಡಹಳ್ಳಿ ಪ್ರಶ್ನೆ
ಬೆಂಗಳೂರು: ಕಾಂಗ್ರೆಸ್ ನಿಂದ ಉಚ್ಚಾಟಿತರಾಗಿ ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಶಾಸಕ ನಡಹಳ್ಳಿ ಮಂಗಳವಾರ ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ರು. ಇಂದು ಬೆಳಗ್ಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಯಡಿಯೂರಪ್ಪರ ನೇತೃತ್ವದಲ್ಲಿ ಎ.ಎಸ್.ಪಾಟೀಲ್ ನಡಹಳ್ಳಿ, ಪತ್ನಿ ಮಹಾದೇವಿ, ಮಧುಗಿರಿ ಕ್ಷೇತ್ರದ ಮಾಜಿ ಶಾಸಕರಾದ ಗಂಗಹನುಮಯ್ಯ, ಪಾವಗಡ ಜಿ.ಪಂ.ಸದಸ್ಯ, ಮಾಜಿ ಸಚಿವ ವೆಂಕಟರಮಣಪ್ಪ ಅವರ ಪುತ್ರ ಕುಮಾರಸ್ವಾಮಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದ್ರು.
Advertisement
Advertisement
ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಶಾಸಕ ನಡಹಳ್ಳಿ, ಅಪ್ಪ-ಮಗ, ಅಣ್ಣ-ತಮ್ಮ ಸ್ಪರ್ಧೆ ಮಾಡ್ಬಹುದು, ಗಂಡ-ಹೆಂಡ್ತಿ ಯಾಕೆ ಸ್ಪರ್ಧಿಸಬಾರದು ಅಂತಾ ಪರೋಕ್ಷವಾಗಿ ಜೆಡಿಎಸ್ ಗೆ ಪ್ರಶ್ನೆ ಮಾಡಿದ್ರು. ನಾನು ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರಿದ್ದು ನಿಜ, ದೇವರ ಹಿಪ್ಪರಗಿ ಕ್ಷೇತ್ರದಲ್ಲಿ ಕುಮಾರಸ್ವಾಮಿ ಅವರ ಜೊತೆಯಲ್ಲಿ ಪಕ್ಷದ ಬಲವರ್ಧನೆಗೂ ಮುಂದಾಗಿದ್ದೆ. ಆದ್ರೆ ನಾನು ಇದೂವರೆಗೂ ಜೆಡಿಎಸ್ ಸದಸ್ಯತ್ವವನ್ನು ಪಡೆದುಕೊಂಡಿರಲಿಲ್ಲ. ದೇವರ ಹಿಪ್ಪರಗಿ ಕ್ಷೇತ್ರ ನನ್ನ ತಾಯಿ. ಆ ಕ್ಷೇತ್ರ ಕಟ್ಟಿದ್ದು ನಾನು, ಅಲ್ಲಿ ಟಿಕೆಟ್ ಕೇಳುವುದಕ್ಕೆ ನನಗೆ ಹಕ್ಕಿದೆ. ಆದ್ರೆ ಕುಮಾರಸ್ವಾಮಿ ಟಿಕೆಟ್ ಹಂಚಿಕೆಯಲ್ಲಿ ನನ್ನನ್ನು ನಿರ್ಲಕ್ಷ್ಯ ಮಾಡಿದ್ರು. ಆ ಕಾರಣಕ್ಕಾಗಿ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದೇನೆ ಅಂತಾ ಅಂದ್ರು.
Advertisement
2008 ಮತ್ತು 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಎ.ಎಸ್.ಪಾಟೀಲ್ ನಡಹಳ್ಳಿ ಎರಡು ಬಾರಿಯ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಎರಡು ಬಾರಿ ಶಾಸಕರಾಗಿದ್ದಾರೆ. 2008ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬಸನಗೌಡ ಆರ್.ಪಾಟೀಲ್‍ರನ್ನು 30,893 ಮತಗಳ ಅಂತರದಿಂದ ಸೋಲಿಸಿದ್ದರು. 2013ರ ಚುನಾವಣೆಯಲ್ಲಿ ಬಿಜೆಪಿ ಸೋಮನಗೌಡ ಪಾಟೀಲ ಅವರನ್ನು 7,916 ಮತಗಳ ಅಂತರದಿಂದ ಸೋಲಿಸುವ ಮೂಲಕ ವಿಜಯ ಪತಾಕೆಯನ್ನು ಹಾರಿಸಿದ್ರು.
Advertisement
ಆದ್ರೆ ಈ ಬಾರಿ ಎ.ಎಸ್.ಪಾಟೀಲ್ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಇತ್ತ ತವರು ಕ್ಷೇತ್ರದಲ್ಲಿ ಪತ್ನಿ ಮಹಾದೇವಿ ನಡಹಳ್ಳಿ ಅವರನ್ನು ಕಣ್ಣಕ್ಕಿಳಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್‍ನ ಭದ್ರತೆ ಕೋಟೆ ಅಂತಾ ಬಿಂಬಿತವಾಗಿರುವ ಮುದ್ದೇಬಿಹಾಳ ಕ್ಷೇತ್ರದಲ್ಲಿ ನಡಹಳ್ಳಿ ಕಮಲದ ರಣಕಹಳೆ ಮೊಳಗಿಸುತ್ತಾರಾ ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ. ಮುದ್ದೇಬಿಹಾಳ ಕ್ಷೇತ್ರದ ಶಾಸಕರಾಗಿರುವ ಕಾಂಗ್ರೆಸ್‍ನ ಅಪ್ಪಾಜಿ ನಾಡಗೌಡ ನಾಲ್ಕು ಬಾರಿ ಶಾಸಕರಾಗಿದ್ದಾರೆ.