Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
Last updated: April 7, 2026 11:10 am
Public TV
Share
3 Min Read
Lokayukta Raid
SHARE

ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ (Lokayukta) ಶಾಕ್ ಕೊಟ್ಟಿದೆ. ರಾಜ್ಯದ 4 ಕಡೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಳ್ಳಾರಿ, ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಸುಶೀಲಮ್ಮ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಶೀಲಮ್ಮ ವರ್ಷದ ಹಿಂದೆ ವಿಆರ್‌ಎಸ್ ಪಡೆದಿದ್ದರು. ಅಕೌಂಟೆಂಟ್ ಆಗಿದ್ದ ವೇಳೆ ಸುಶೀಲಮ್ಮ ಭ್ರಷ್ಟಾಚಾರ ಮಾಡಿದ್ದು, ಆದಾಯ ಮೀರಿ ಹಣ, ಆಸ್ತಿ ಗಳಿಕೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಚಿತ್ರದುರ್ಗದ ಮೆದೇಹಳ್ಳಿ ಬಡಾವಣೆಯ ಮನೆ, ಹಿರಿಯೂರು ತಾಲೂಕಿನ ಯಾದಲಘಟ್ಟ ಗ್ರಾಮದ ತೋಟದ ಮನೆ ಮೇಲೆ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Chitradurga Nirmithi Kendra Former Accountant Lokayukta Raid

ಅಲ್ಲದೇ ಬಳ್ಳಾರಿಯಲ್ಲಿ ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಶಿವಣ್ಣ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬಳ್ಳಾರಿಯ ಕಚೇರಿ, ಸಿದ್ಧಾರ್ಥ್ ನಗರದ ಮನೆ ಸೇರಿದಂತೆ ಒಟ್ಟು ನಾಲ್ಕು ಕಡೆ ದಾಳಿ ನಡೆಸಲಾಗಿದೆ. ಹಲವು ಆರೋಪದ ಹಿನ್ನೆಲೆ ಶಿವಣ್ಣ ಮೇಲೆ ದೂರುಗಳಿದ್ದವು. ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಆರೋಪದ ಹಿನ್ನೆಲೆ ದಾಳಿ ನಡೆಸಲಾಗಿದೆ. ಅಧಿಕಾರಿ ಶಿವಣ್ಣ ಬಳಸುವ ಸರ್ಕಾರಿ ಬೊಲೆರೋ ಕಾರನ್ನೂ ಬಿಡದೇ ಪರಿಶೀಲನೆ ನಡೆಸಲಾಗುತ್ತಿದೆ. ನಾಲ್ಕು ಜನ ಅಧಿಕಾರಿಗಳು ಬೊಲೆರೋ ತಲಾಶ್ ನಡೆಸಿದ್ದಾರೆ. ಈ ವೇಳೆ ಬೊಲೆರೋದಲ್ಲಿರುವ ಸಿಕ್ಕ ಕೆಲವು ದಾಖಲೆಗಳನ್ನ ಹೆಕ್ಕಿ ತೆಗೆದು ಪರಿಶೀಲನೆಗೆ ಕೊಂಡೊಯ್ದಿದ್ದಾರೆ. ಎರಡು ತಂಡಗಳಾಗಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Ballari Lokayukta Raid

ಇನ್ನು ಆದಾಯಕ್ಕೂ ಮೀರಿ ಗಳಿಕೆ ಆರೋಪದ ಹಿನ್ನೆಲೆ ಲೋಕೋಪಯೋಗಿ ಇಲಾಖೆ ಎಇಇ ರೇವಣ್ಣ ಮನೆ ಹಾಗೂ ಕಚೇರಿಯಲ್ಲಿ ಮೈಸೂರು ಲೋಕಾಯುಕ್ತ ಕಾರ್ಯಾಚರಣೆ ನಡೆಸಿದೆ. ಮೈಸೂರಿನ ಕಚೇರಿ ಹಾಗೂ ಮಂಡ್ಯದ ಎರಡು ನಿವಾಸದಲ್ಲಿ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಎಸ್‌ಪಿ ಟಿಜೆ ಉದೇಶ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

ಶಿವಮೊಗ್ಗದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ.ಕೆ.ಆರ್ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆಸಿದೆ. ಶಿವಮೊಗ್ಗ, ಶಿಕಾರಿಪುರ ಹಾಗೂ ಸಾಗರದಲ್ಲಿ ದಾಳಿ ಮಾಡಲಾಗಿದೆ. ಶಿಕಾರಿಪುರ ಪಟ್ಟಣದ ಚೆನ್ನಕೇಶವ ನಗರದಲ್ಲಿನ ಶೋಭಾ ಮನೆ ಮೇಲೆ ದಾಳಿ ನಡೆಸಿದ್ದು, ಶಿಕಾರಿಪುರ ತಾಲೂಕು ತರಲಘಟ್ಟ ಬಳಿಯ 4 ಎಕರೆ ತೋಟ ಹಾಗೂ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಲಾಗಿದೆ. ಶೋಭಾ ಅವರ ಒಡೆತನದ ಸಾಗರ ತಾಲೂಕಿನ ಅಚಾಪುರ ಬಳಿಯ ಶಾಲೆ ಮೇಲೂ ದಾಳಿ ಮಾಡಲಾಗಿದೆ. ಶಿವಮೊಗ್ಗದ ನಗರದ ನವಿಲೆ ಬಳಿಯ ಮನೆಯಲ್ಲೂ ದಾಖಲೆ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಶಿವಮೊಗ್ಗ ನಗರದ ಕೆಇಬಿ ಸರ್ಕಲ್ ಬಳಿಯ ಬಿಸಿಎಂ ಜಿಲ್ಲಾ ಕಚೇರಿ ಮೇಲೂ ದಾಳಿ ಮಾಡಲಾಗಿದೆ. ಇದನ್ನೂ ಓದಿ: ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Shivamogga Lokayukta Raid

ಬಿಸಿಎಂ ಇಲಾಖೆಯ ರಾಘವೇಂದ್ರ ಎಂಬವರ ಮನೆ ಮೇಲೆ ಸಹ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶಿವಮೊಗ್ಗ ನಗರದ ಗೋಪಾಳ ಬಳಿಯ ಚಾಲುಕ್ಯನಗರದಲ್ಲಿನ ಮನೆಯಲ್ಲಿ ಬೆಳಗ್ಗೆಯಿಂದಲೂ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. 5 ತಂಡವಾಗಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ದಾವಣಗೆರೆ ಎಸ್ಪಿ ನೇತೃತ್ವದಲ್ಲಿ ಲೋಕಾ ಟೀಂ ದಾಳಿ ನಡೆಸಿದ್ದು, ಶಿವಮೊಗ್ಗ ಜೊತೆಗೆ ಹಾವೇರಿ, ದಾವಣಗೆರೆ ಅಧಿಕಾರಿಗಳು ಕೂಡ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

TAGGED:BallaribengaluruChitradurgacorruptionkarnatakalokayuktamysurushivamoggaಚಿತ್ರದುರ್ಗಬಳ್ಳಾರಿಬೆಂಗಳೂರುಭ್ರಷ್ಟಾಚಾರಮೈಸೂರುಲೋಕಾಯುಕ್ತಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

Indonesia Train Accident
Crime

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ – 7 ಪ್ರಯಾಣಿಕರು ಸಾವು, 81 ಮಂದಿಗೆ ಗಾಯ

Public TV
By Public TV
16 minutes ago
Rs 1 lakh to close a pothole in Bengaluru GBAs expensive pothole business exposed 2
Bengaluru City

ಅಬ್ಬಬ್ಬಾ.. ಬೆಂಗಳೂರಿನಲ್ಲಿ ಒಂದು ಗುಂಡಿ ಮುಚ್ಚಲು 1 ಲಕ್ಷ!- ಬಯಲಾಯ್ತು ಜಿಬಿಎ ‘ದುಬಾರಿ’ ಗುಂಡಿ ಬಿಸಿನೆಸ್!

Public TV
By Public TV
31 minutes ago
BESCOM Electricity Bill Name Change
Bengaluru City

ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್ – ಮನೆಯಿಂದಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ

Public TV
By Public TV
59 minutes ago
Karnataka Government bus overturns near Challakere Chitradurga 44 passengers rescued 1
Bellary

ಚಳ್ಳಕೆರೆ ಬಳಿ ಬೆಂಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್ ಪಲ್ಟಿ- 44 ಪ್ರಯಾಣಿಕರು ಪಾರು

Public TV
By Public TV
1 hour ago
US Iran War 500 million dollar superyacht Nord linked to Putin aide Alexey Mordashov sails through Hormuz amid blockade 1
Latest

ದಿಗ್ಬಂಧನದ ಮಧ್ಯೆ ಹಾರ್ಮೂಜ್‌ ದಾಟಿತು 4,700 ಕೋಟಿ ರೂ. ಮೌಲ್ಯದ ಸೂಪರ್‌ಯಾಚ್‌!

Public TV
By Public TV
2 hours ago
Turmeric Powder
Bengaluru City

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ – ಸರ್ಕಾರದಿಂದಲೇ ಅಧಿಕೃತ ಟೆಸ್ಟ್‌ಗೆ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?