ರಾಮನಗರ: ಪಾಪಿ ತಾಯಿಯೊಬ್ಬಳು (Mother) ಹೆತ್ತ ಮಗುವನ್ನೇ (Baby) ನದಿಗೆ (River) ಎಸೆದ ಘಟನೆ ರಾಮನಗರ (Ramanagara) ಜಿಲ್ಲೆ ಚನ್ನಪಟ್ಟಣ (Channaptna) ತಾಲೂಕಿನ ಕಾಲಿಕೆರೆ ಗ್ರಾಮದಲ್ಲಿ ನಡೆದಿದೆ.
ಭಾಗ್ಯಾ ಹೆತ್ತ ಮಗುವನ್ನು ನದಿಗೆ ಎಸೆದ ತಾಯಿ. ಕಳೆದ 2 ವರ್ಷದಿಂದ ಭಾಗ್ಯಾ ತಾಯಿ ಮನೆಯಲ್ಲೇ ವಾಸವಿದ್ದಳು. ಭಾಗ್ಯಾ ಹಾಗೂ ಶ್ರೀನಿವಾಸ್ ದಂಪತಿಯ 1 ವರ್ಷ 6 ತಿಂಗಳ ಹಸುಗೂಸನ್ನು ಭಾಗ್ಯಾ ಮಂಗಳವಾರ ರಾತ್ರಿ ಕೊಂಡಾಪುರ ಬಳಿಯ ಕಣ್ವ ನದಿಗೆ ಎಸೆದಿದ್ದಾಳೆ. ಇಂದು ಬೆಳಗ್ಗೆ ಕುಟುಂಬಸ್ಥರು ಮಗು ಎಲ್ಲಿ ಎಂದು ಕೇಳಿದಾಗ ನದಿಗೆ ಎಸೆದಿರುವುದಾಗಿ ಭಾಗ್ಯಾ ಹೇಳಿದ್ದಾಳೆ. ಇದನ್ನೂ ಓದಿ: ಹೃದಯಾಘಾತದಿಂದ 7 ತರಗತಿ ವಿದ್ಯಾರ್ಥಿನಿ ಸಾವು
Advertisement
Advertisement
ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗ್ರಾಮಸ್ಥರು ನದಿಯಿಂದ ಮೃತ ಮಗುವಿನ ಶವ ಹೊರತೆಗೆದಿದ್ದಾರೆ. ಮಗುವನ್ನು ನದಿಗೆ ಎಸೆದಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: NIAಯಿಂದ ಬಂಧನಕ್ಕೊಳಗಾದ ವಿದ್ಯಾರ್ಥಿಗೆ ಕಾಲೇಜಲ್ಲಿರುವಾಗ್ಲೇ ಇತ್ತು ISIS ಸಂಪರ್ಕ!
Advertisement