ಕೊಪ್ಪಳ: ಕ್ಷುಲ್ಲಕ ಕಾರಣಕ್ಕೆ ಮಗನೇ ತಂದೆಯ ತಲೆಗೆ ರಾಡ್‍ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಗಂಗಾವತಿಯಲ್ಲಿ ನಡೆದಿದೆ.
ಗಂಗಾವತಿ ತಾಲೂಕಿನ ಮುಕ್ಕುಂಪಿ ಗ್ರಾಮದ ಮರಿಯಪ್ಪ (45) ಅವರನ್ನು ಮಗ ಶ್ರೀಕಾಂತ್ ಕೊಲೆ ಮಾಡಿದ್ದಾರೆ.
ಸ್ವಂತ ಮಗನೇ ಕ್ಷುಲ್ಲಕ ಕಾರಣಕ್ಕೆ ತಂದೆಯ ತಲೆಗೆ ರಾಡ್‍ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಕೊಲೆ ಮಾಡಿ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಯನ್ನು ಘಟನೆ ನಡೆದ ಕೆಲವೇ ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬೆಳಗ್ಗೆ ತಂದೆಯನ್ನು ಕೊಲೆ ಮಾಡಿ ಊರಿನಿಂದ ಓಡಿ ಹೋಗಿದ್ದ ಶ್ರೀಕಾಂತನ ಮೊಬೈಲ್ ಟವರ್ ಲೋಕೇಶನ್ ಆಧಾರದಲ್ಲಿ ಗಂಗಾವತಿ ಪೊಲೀಸರು ಮಿಂಚಿನ ಕಾರ್ಯಚರಣೆ ಮಾಡಿ ಮಧ್ಯಾಹ್ನದ ವೇಳೆಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂಬಂಧ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.