ಇಂದು ಬೆಳಗ್ಗೆಯಷ್ಟೇ ರಾಮ್ ಚರಣ್ ತಂದೆಯಾಗಿದ್ದಾರೆ. ‘ಹೆಣ್ಣು ಮಗುವಿನ (Baby Girl) ತಂದೆಯಾಗಿದ್ದಕ್ಕೆ ಹೆಮ್ಮೆ ಪಡುತ್ತೇನೆ’ ಎಂದು ಬೆಳಗ್ಗೆಯಷ್ಟೇ ರಾಮ್ ಚರಣ್ (Ramcharan) ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದರು. ಆ ಮಗುವಿಗಾಗಿ ಆರ್.ಆರ್.ಆರ್ ಸಿನಿಮಾದ ‘ನಾಟು ನಾಟು’ (Natu Natu) ಹಾಡಿನ ಗಾಯಕ ಕಾಲ ಭೈರವ್ (Kala Bhairav) ವಿಶೇಷ ಗಿಫ್ಟ್ ವೊಂದನ್ನು ಕೊಟ್ಟಿದ್ದಾರೆ. ಆ ಉಡುಗೊರೆಯನ್ನು ರಾಮ್ ಚರಣ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Advertisement
ರಾಮ್ ಚರಣ್ ಮತ್ತು ಉಪಾಸನಾ (Upasana) ದಂಪತಿಯ ಮಗುವಿಗಾಗಿ ಕಾಲ ಭೈರವ್ ಮೆಲೊಡಿ ಟ್ಯೂನ್ ವೊಂದನ್ನು ಕಂಪೋಸ್ ಮಾಡಿದ್ದು, ‘ಇಂಥದ್ದೊಂದು ರಾಗವನ್ನು ಕಂಪೋಸ್ ಮಾಡಿ ನನ್ನ ಮಗುವಿಗೆ ಉಡುಗೊರೆಯಾಗಿ (Gift) ನೀಡಿದ್ದಕ್ಕೆ ಧನ್ಯವಾದಗಳು ಕಾಲ ಭೈರವ’ ಎಂದು ರಾಮ್ ಚರಣ್ ಟ್ವೀಟ್ ಮಾಡಿದ್ದಾರೆ. ಅನೇಕರು ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
Advertisement
Advertisement
ಇಂದು ಬೆಳಗ್ಗೆಯಷ್ಟೇ ಹೈದರಾಬಾದ್ ನ ಜುಬ್ಲಿ ಹಿಲ್ಸ್ ಅಪೋಲೊ ಆಸ್ಪತ್ರೆಯಲ್ಲಿ ಉಪಾಸನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಅವರ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಮಗು ಮತ್ತು ತಾಯಿ ಆರೋಗ್ಯವಾಗಿದ್ದಾರೆ. ಅವರಿಗೆ ನಿಮ್ಮ ಹಾರೈಕೆ ಇರಲಿ ಎಂದು ರಾಮ್ ಚರಣ್ ತಿಳಿಸಿದ್ದಾರೆ. ಇದನ್ನೂ ಓದಿ:ಮನುಷ್ಯರಂತೆ ವರ್ತಿಸಿ, ನನ್ನ ಪಾಡಿಗೆ ನನ್ನ ಬಿಟ್ಟುಬಿಡಿ- ‘ಪುಷ್ಪ’ ನಟಿ ಅನಸೂಯಾ
Advertisement
ನಿನ್ನೆಯಷ್ಟೇ ತಮ್ಮ ಕುಟುಂಬದ ಕುಡಿಗಾಗಿ ಶಾಪಿಂಗ್ ಮಾಡುತ್ತಿರುವ ವಿಷಯವನ್ನು ಹಾಗೂ ಪ್ರಜ್ವಲ್ ಫೌಂಡೇಶನ್ ತಮ್ಮ ಮಗುವಿಗಾಗಿ ಸ್ಪೆಷಲ್ ತೊಟ್ಟಿಲನ್ನು ಗಿಫ್ಟ್ ನೀಡಿರುವುದಾಗಿ ಉಪಾಸನಾ ತಿಳಿಸಿದ್ದರು. ಪ್ರಜ್ವಲ್ ಫೌಂಡೇಶನ್ ನಲ್ಲಿ ಕೆಲಸ ಮಾಡುವ ಮಹಿಳೆಯರೇ ಈ ಸ್ಪೆಷಲ್ ತೊಟ್ಟಿಲನ್ನು ರೆಡಿ ಮಾಡಿದ್ದು, ಅದು ಮರದ ತೊಟ್ಟಿಲಾಗಿದೆ. ಉಪಾಸನಾ ಮಗುವಿಗಾಗಿಯೇ ಅದನ್ನು ಸಿದ್ಧ ಮಾಡಲಾಗಿದೆ ಎಂದು ತಿಳಿಸಲಾಗಿತ್ತು. ಅದೊಂದು ತೂಗು ತೊಟ್ಟಿಲಾಗಿದ್ದು ಕುಸುರಿ ಕೆಲಸವನ್ನೂ ಹೊಂದಿದೆ.
ಈ ಹಿಂದೆ ರಾಮ್ ಚರಣ್ ತೇಜ ಅವರ ಮೊದಲ ಮಗುವಿನ ಜನನ (Childbirth) ಯಾವ ದೇಶದಲ್ಲಿ ಆಗಲಿದೆ ಎನ್ನುವ ಕುರಿತು ಚರ್ಚೆ ನಡೆದಿತ್ತು. ಅಮೆರಿಕಾದಲ್ಲೇ ಅವರು ಮೊದಲ ಮಗುವಿನ ಜನನಕ್ಕೆ ತಯಾರಿ ಮಾಡಿಕೊಂಡಿದ್ದಾರೆ ಎಂದು ಸುದ್ದಿ ಆಗಿತ್ತು. ರಾಮ್ ಚರಣ್ ಪತ್ನಿ ಉಪಾಸನಾ ಅವರ ಸಲಹೆ ಮೇರೆಗೆ ಇಂಥದ್ದೊಂದು ತೀರ್ಮಾನಕ್ಕೆ ಬಂದಿದ್ದಾರೆ ಎಂದು ಹೇಳಲಾಗಿತ್ತು. ಇದೆಲ್ಲ ಊಹಾಪೋಹಗಳಿಗೂ ಉಪಾಸನಾ ಉತ್ತರಿಸಿದ್ದರು.
ರಾಮ್ ಚರಣ್ ಪತ್ನಿ ಉಪಾಸನಾ ಈ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದು, ‘ಅಮೆರಿಕಾದಲ್ಲಿ ಹೆರಿಗೆಗೆ ತಯಾರಿ ಮಾಡಿಕೊಂಡಿದ್ದೇವೆ ಎನ್ನುವ ಸುದ್ದಿ ಸುಳ್ಳು. ಅದು ಯಾಕೆ ಈ ರೀತಿ ಹಬ್ಬಿತೋ ಗೊತ್ತಿಲ್ಲ. ನಮ್ಮ ಮಗುವಿನ ಜನನ ಭಾರತದಲ್ಲೇ ಆಗಲಿದೆ. ಸುಳ್ಳು ಸುದ್ದಿಗಳನ್ನು ನಂಬಬೇಡಿ’ ಎಂದಿದ್ದಾರೆ. ಭಾರತದಲ್ಲೇ ನಮ್ಮ ಮಗು ಜನಿಸಲಿದೆ ಎಂದು ಅವರು ತಿಳಿಸಿದ್ದರು.
ರಾಮ್ ಚರಣ್ ಮತ್ತು ಉಪಾಸನಾ ದಂಪತಿ ತಡವಾಗಿ ಮಗು ಮಾಡಿಕೊಳ್ಳಲು ನಿರ್ಧರಿಸಿದ್ದರು. ಹಲವು ವರ್ಷಗಳ ನಂತರ ಉಪಾಸನಾ ಮಡಿಲಿಗೆ ಮಗು ಬರುತ್ತಿದೆ. ಹಾಗಾಗಿ ಸಹಜವಾಗಿಯೇ ದೊಡ್ಡ ಆಸ್ಪತ್ರೆಯಲ್ಲೇ ಮಗುವಿನ ಜನನ ಆಗಲಿದೆ ಎಂದು ಊಹಿಸಲಾಗಿತ್ತು. ಅಮೆರಿಕಾ ವೈದ್ಯರ ಬಗ್ಗೆ ರಾಮ್ ಚರಣ್ ಮಾತನಾಡಿದ್ದರಿಂದ, ಅಮೆರಿಕಾದಲ್ಲಿ ಮಗುವಿನ ಜನನ ಆಗಲಿದೆ ಎಂದು ಅಂದಾಜಿಸಲಾಗಿತ್ತು. ಇದೆಲ್ಲದಕ್ಕೂ ಉಪಾಸನಾ ಪ್ರತಿಕ್ರಿಯಿಸಿದ್ದಾರೆ. ಕೊನೆಗೂ ತಮ್ಮದೇ ಆಸ್ಪತ್ರೆಯಲ್ಲಿ ಅವರು ಮಗುವಿಗೆ ಜನ್ಮ ನೀಡಿದ್ದಾರೆ.