– ಇಬ್ಬರ ಸಾವು, ಮೂವರು ಗಂಭೀರ
ಬೆಂಗಳೂರು: ಕರ್ನಾಟಕದಿಂದ ತಮಿಳುನಾಡಿಗೆ ಚುನಾವಣಾ (Lok Sabha Election 2024) ಕರ್ತವ್ಯಕ್ಕೆ ತೆರಳಿದ್ದ ಪೊಲೀಸ್ (Police) ಅಧಿಕಾರಿ ಹಾಗೂ ತಮಿಳುನಾಡಿನ ಕಾನ್ಸ್‌ಟೇಬಲ್ ಒಬ್ಬರು ಅಪಘಾತದಲ್ಲಿ (Accident) ಮೃತಪಟ್ಟ ಘಟನೆ ತಮಿಳುನಾಡಿನ ಕಿಲ್ಪೆನ್ನತುರ್ ಎಂಬಲ್ಲಿ ನಡೆದಿದೆ.
- Advertisement -
ಕೆಎಸ್‍ಆರ್‌ಪಿ ಅಸಿಸ್ಟೆಂಟ್ ಕಮಾಂಡೆಂಟ್ ಪ್ರಭಾಕರ್ ಹಾಗೂ ತಮಿಳುನಾಡಿನ (Tamil Nadu) ಕಾನ್ಸ್‌ಟೇಬಲ್ ದಿನೇಶ್ ಮೃತಪಟ್ಟ ಪೊಲೀಸರು ಎಂದು ತಿಳಿದು ಬಂದಿದೆ. ಪ್ರಭಾಕರ್ (KSRP Police Officer Prabhakar) ಅವರು ಜೀಪ್‍ನಲ್ಲಿ ತಿರುವಣ್ಣಾಮಲೈ- ದಿಂಡಿವನಂ ಹೈವೇಯಲ್ಲಿ ತೆರಳುತ್ತಿದ್ದಾಗ ಬಸ್ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಶಾಸಕ ಪುತ್ರನ ಬೈಕ್ ಅಪಘಾತ
- Advertisement -
- Advertisement -
ಇಬ್ಬರ ಮೃತದೇಹಗಳನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಸಿದ್ಧತೆ ನಡೆಸಿದ್ದಾರೆ. ಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
- Advertisement -
ಒಟ್ಟು ಐವರು ಪೊಲೀಸರು ಜೀಪ್‍ನಲ್ಲಿದ್ದರು ಎಂದು ತಿಳಿದು ಬಂದಿದೆ. ಹೇಮಂತ್ ಕುಮಾರ್ (ಡೆಪ್ಯೂಟಿ ಕಮಾಂಡರ್), ವಿಟ್ಠಲ್ ಗಡಾದರ್ (ಹೆಡ್ ಕಾನ್ಸ್‌ಟೇಬಲ್), ಜಯಕುಮಾರ್ (ಕಾನ್ಸ್‌ಟೇಬಲ್) ಗಾಯಗೊಂಡಿದ್ದು, ಮೂವರನ್ನೂ ತಿರುವಣ್ಣಾಮಲೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಆರ್ಟಿಕಲ್ 370 ಸಹವಾಸ ಬೇಡ: ಕಾಂಗ್ರೆಸ್‍ಗೆ ಅಮಿತ್ ಶಾ ಎಚ್ಚರಿಕೆ