ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ (Karnataka-Maharashtra Dispute) ವಿವಾದ ಪ್ರಕರಣವನ್ನು ಸುಪ್ರೀಂಕೋರ್ಟ್‌ನಲ್ಲಿ (Supreme Court) ವಿಚಾರಣೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ಈ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಮರಾಠಿ (Marati) ಭಾಷಿಕರು ಪುಂಡಾಟ ಮೆರೆಯುತ್ತಿದ್ದಾರೆ. ಎಂಇಎಸ್ ಬೆಳಗಾವಿಯಲ್ಲಿ ಭಾಷಾ ವೈಷಮ್ಯದ ವಿಷ ಬೀಜ ಬಿತ್ತಲು ಯತ್ನಿಸುತ್ತಿದೆ.
ಹೌದು, ಬೆಳಗಾವಿಯ ಪ್ರತಿಷ್ಠಿತ ಕಾಲೇಜಿನಲ್ಲಿ ಫೆರವಲ್ ಡೇ ಆಚರಣೆ ವೇಳೆ ಕನ್ನಡ ಬಾವುಟ (Karnataka Flag) ಹಿಡಿದು ಡಾನ್ಸ್ ಮಾಡುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಲಾಗಿದೆ. ಕೆಲ ಮರಾಠಿ ಭಾಷಿಕ ವಿದ್ಯಾರ್ಥಿಗಳು ಆತನ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ವರುಣಾದಿಂದಲೇ ತಂದೆ ಸ್ಪರ್ಧಿಸಲಿ ಎಂದ ಯತೀಂದ್ರ – ಧರ್ಮ ಸಂಕಟದಲ್ಲಿ ಸಿದ್ದರಾಮಯ್ಯ
Advertisement
Advertisement
ಕಾಲೇಜು ಸಿಬ್ಬಂದಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಕಾಲೇಜಿಗೆ ಕರುನಾಡ ವಿಜಯ ಸೇನೆ ಯುವ ಘಟಕದ ಅಧ್ಯಕ್ಷ ಸಂಪತ್ ಕುಮಾರ್ ದೇಸಾಯಿ ಹಾಗೂ ಕಾರ್ಯಕರ್ತರು ಭೇಟಿ ನೀಡಿದ್ದಾರೆ.
Advertisement
Advertisement
ಇಂದು ಕಾಲೇಜಿಗೆ ಮುತ್ತಿಗೆ ಹಾಕೋದಾಗಿ ಕನ್ನಡಪರ ಸಂಘಟನೆ ಎಚ್ಚರಿಕೆ ನೀಡಿದೆ. ಇನ್ನು ಸ್ಥಳಕ್ಕೆ ಟಿಳಕವಾಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಚುನಾವಣೆಗೆ ನಿಂತವರಲ್ಲಿ ಒಳ್ಳೆಯವರು ಕಾಣದಿದ್ರೆ ನೋಟಾಗೆ ಒತ್ತಿ: ಕಾಗೇರಿ ಕರೆ