Bengaluru CityCrimeDistrictsKarnatakaLatestMain Post

ಶಿಕ್ಷಕಿ ಬೈದಿದ್ದಕ್ಕೆ ಡೆತ್‍ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಶಿಕ್ಷಕಿ (Teacher) ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಬಾಣಸವಾಡಿ (Banasavadi) ಯ ಪಿಳ್ಳಾರೆಡ್ಡಿ ನಗರದಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿನಿ (Student Suicide) ಯನ್ನು ಅಮೃತಾ ಎಂದು ಗುರುತಿಸಲಾಗಿದೆ.

ಅಮೃತಾ ಬಾಣಸವಾಡಿಯ ಮರಿಯಮ್ ಸ್ಕೂಲ್ ನಲ್ಲಿ 10ನೇ ತರಗತಿ ಓದುತ್ತಿದ್ದಳು. ಇದೀಗ ಟೀಚರ್ ಎಲ್ಲಾ ವಿದ್ಯಾರ್ಥಿಗಳ ಮುಂದೆ ಬೈದಿದ್ದಾರೆಂದು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಭಾನುವಾರ ಸಂಜೆ 5.15ರ ಸುಮಾರಿಗೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟಿದ್ದಾಳೆ. ಅದರಲ್ಲಿ “Mom am sorry am not able to forget in school I cannot live with this guilty” ಎಂದು ಕೊನೆಯಲ್ಲಿ “I Love u mom, Daddy” ಅಂತ ಬರೆದಿದ್ದಾಳೆ. ಇದನ್ನೂ ಓದಿ: ಕ್ಯಾನ್ಸರ್‌ನಿಂದ ಜೀವನವೇ ಬದಲಾಯ್ತು – ಸಾವನ್ನು ಗೆದ್ದ ನಟಿ ಲೀಸಾ ರೇ ಬಿಚ್ಚಿಟ್ಟ ನಿಜ ಕಥೆ

ಈ ಸಂಬಂಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Live Tv

Leave a Reply

Your email address will not be published. Required fields are marked *

Back to top button