ಶಿವಮೊಗ್ಗ: ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜಿನಲ್ಲಿ ನಡೆದಿದೆ.
ಮೇಘಾಶ್ರೀ (18) ಮೃತ ವಿದ್ಯಾರ್ಥಿನಿ. ಈಕೆ ಶಿವಮೊಗ್ಗದ ಶರಾವತಿ ನಗರದಲ್ಲಿರುವ ಆದಿ ಚುಂಚನಗಿರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಇದನ್ನೂ ಓದಿ: ಭಾರತದ ವಿರುದ್ಧ ಉಗ್ರ ಚಟುವಟಿಕೆಗಳಲ್ಲಿ ಭಾಗಿ – ಖಲಿಸ್ತಾನಿ ಭಯೋತ್ಪಾದಕ ಪಾಕ್‌ನಲ್ಲಿ ಸಾವು
Advertisement
Advertisement
ಮೇಘಾಶ್ರೀ ಹೋಂ ಸಿಕ್‍ಗೆ ಒಳಗಾಗಿದ್ದಳು. ಇದೇ ಕಾರಣದಿಂದ ಈಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇತ್ತ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೇಘಾ ಶ್ರೀ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
Advertisement
Advertisement