ರಾಯಚೂರು: ಕ್ಲಾಸ್ ಅರ್ಧಕ್ಕೆ ಬಿಟ್ಟು ಹಾಸ್ಟೆಲ್ (Hostel) ಗೆ ಬಂದು ವಿದ್ಯಾರ್ಥಿನಿ ಆತ್ಮಹತ್ಯೆ (Student Suicide) ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ಪಟ್ಟಣದ ವಿಸಿಬಿ ಕಾಲೇಜು ಹಾಸ್ಟೆಲ್ ನಲ್ಲಿ ನಡೆದಿದೆ.
ಐಶ್ವರ್ಯಾ (18) ಆತ್ಮಹತ್ಯೆಗೆ ಶರಣಾದವಳಾಗಿದ್ದು, ಈಕೆ ಲಿಂಗಸುಗೂರು ತಾಲೂಕಿನ ಗೋನವಾಟ್ಲ ತಾಂಡಾದ ವಿದ್ಯಾರ್ಥಿನಿ. ಐಶ್ವರ್ಯಾ ವಿಸಿಬಿ ಕಾಲೇಜಿನ ಫಸ್ಟ್ ಪಿಯು ಸೈನ್ಸ್ ನಲ್ಲಿ ಅಭ್ಯಾಸ ಮಾಡುತ್ತಿದ್ದಳು.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮಾಹಿತಿ ತಿಳಿದು ಸ್ಥಳಕ್ಕೆ ಲಿಂಗಸುಗೂರು ಪೊಲೀಸರು (Lingasaguru Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕೆಲಸ ಕೊಡಿಸುವ ಆಸೆ ತೋರಿಸಿ ಸೆಕ್ಸ್- ಟೆಕ್ಕಿ ಅರೆಸ್ಟ್
ಈ ಸಂಬಂಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k