ಬೆಂಗಳೂರು: ನಗರದ ಜ್ಞಾನಭಾರತಿ (Jnanabharathi) ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ವಿದ್ಯಾರ್ಥಿನಿಯನ್ನು ಹೆಚ್‌ಡಿ ಕೋಟೆಯ ಹೆಬ್ಬಲಗುಪ್ಪೆ ಹಳ್ಳಿಯ ಪಾವನ ಹೆಚ್‌ಎನ್ (23) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಜನರು ಅವರನ್ನು ಘೋಷಣೆ ಕೂಗಲು ಕಳುಹಿಸಿದ್ದರೆ ಕೂಗಲು ಬಿಡಿ – ವಿಪಕ್ಷಗಳ ವಿರುದ್ಧ ಸ್ಪೀಕರ್ ಗರಂ
ಮೃತ ವಿದ್ಯಾರ್ಥಿನಿ ಕನ್ನಡ ಅಧ್ಯಯನ ಕೇಂದ್ರದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಳು. ಸೋಮವಾರ ಮದ್ಯಾಹ್ನ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ.
ಸದ್ಯ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ರೈಲು ನಿಲ್ಲೋದಕ್ಕೂ ಮುನ್ನ ಇಳಿಯಲು ಹೋಗಿ ಅವಘಡ – ಹಳಿಗೆ ಸಿಲುಕಿ 2 ಕಾಲು ಕಟ್, ಯುವಕ ಸಾವು