ಹೈದರಾಬಾದ್: ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಪಕ್ಷದ ಸ್ಥಳೀಯ ಕಾರ್ಪೋರೇಟರ್ ಕಚೇರಿಯಲ್ಲಿ ವಿದ್ಯಾರ್ಥಿಯೊಬ್ಬನ ಹತ್ಯೆಯಾಗಿದೆ (Murder).
ಹೈದರಾಬಾದ್‌ನ ಲಲಿತಾಬಾಗ್ ಪ್ರದೇಶದಲ್ಲಿರುವ ಕಚೇರಿಯಲ್ಲಿ ಕೊಲೆ ನಡೆದಿದೆ. ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ ಬಳಿಕ ಕಾರ್ಪೊರೇಟರ್ ಸಂಬಂಧಿ 22 ವರ್ಷದ ವಿದ್ಯಾರ್ಥಿ (Student) ಮುರ್ತಾಜಾ ಅನಸ್ ಎಂದು ಗುರುತಿಸಿದ್ದಾರೆ. ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿಯಲಿಲ್ಲ.
ಇತ್ತೀಚೆಗೆ ಅಸಾದುದ್ದೀನ್ ಓವೈಸಿ (Asaduddin Owaisi), 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ತಮ್ಮ ಪಕ್ಷ ಪ್ರತಿನಿಧಿಸುವುದಾಗಿ ಹೇಳಿದ್ದರು. ಕರ್ನಾಟದ 13 ಕ್ಷೇತ್ರಗಳಲ್ಲಿ ಎಐಎಂಐಎಂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಘೋಷಿಸಿದ್ದರು.