ಮಂಡ್ಯ: ತಾಯಿ ಇಲ್ಲದ ತಬ್ಬಲಿ ಮಗು ಎಂದು ಅಜ್ಜಿ ಆ ಹುಡುಗನನ್ನು ಮುದ್ದಾಗಿ ಸಾಕಿದ್ದಳು. ಇದೀಗ ಆ ಹುಡುಗ ವಸತಿ ಶಾಲೆಯಿಂದ (Residential School) ನಿಗೂಢವಾಗಿ ನಾಪತ್ತೆಯಾಗಿದ್ದಾನೆ. ಇತ್ತ ಮುದ್ದಾಗಿ ಸಾಕಿದ್ದ ಮೊಮ್ಮಗ ಕಾಣುತ್ತಿಲ್ಲ ಎಂದು ಅಜ್ಜಿ ಕಣ್ಣೀರಿಡುತ್ತಿದ್ದಾರೆ.
ಮಂಡ್ಯ (Mandya) ಜಿಲ್ಲೆಯ ಪಾಂಡವಪುರ ತಾಲೂಕಿನ ಹಿರೇಮರಹಳ್ಳಿ ಗ್ರಾಮದ ಈರೇಗೌಡ ಎಂಬುವವರ ಪುತ್ರ ಕಿಶೋರ್ ನಾಪತ್ತೆಯಾಗಿದ್ದಾನೆ. ಚಿಕ್ಕ ವಯಸ್ಸಿನಲ್ಲಿ ತಾಯಿ ಕಳೆದುಕೊಂಡು ತಬ್ಬಲಿಯಾದ ಕಿಶೋರ್‌ನನ್ನು ತಂದೆ ಹಾಗೂ ಅಜ್ಜಿ ಪ್ರೀತಿಯಿಂದ ಸಾಕಿ ಸಲಹಿದ್ದರು. ಕಿಶೋರ್‌ನನ್ನು ವಿದ್ಯಾವಂತನನ್ನಾಗಿ ಮಾಡಬೇಕೆಂಬ ಕನಸನ್ನು ಕಟ್ಟಿಕೊಂಡಿದ್ದರು. ಹೀಗಾಗಿ ಕಿಶೋರ್‌ನನ್ನು ಮಂಡ್ಯದ ತಂಗಳಕೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ (Morarji Desai Residential School) ಸೇರಿಸಿದ್ದರು. ಇದನ್ನೂ ಓದಿ: ಗೇಟ್ ತೆಗೆಯೋದು ತಡವಾಗಿದ್ದಕ್ಕೆ ಸೆಕ್ಯೂರಿಟಿಗೆ ಕಪಾಳಮೋಕ್ಷ ಮಾಡಿದ ಪ್ರಾಧ್ಯಾಪಕಿ
Advertisement
Advertisement
ವಸತಿ ಶಾಲೆಯಲ್ಲಿ ಕಿಶೋರ್ 9ನೇ ತರಗತಿ ವಿದ್ಯಾಭ್ಯಾಸ (Education) ಮಾಡುತ್ತಿದ್ದ. ಜು.27ರಂದು ರಜೆ ಇದ್ದ ಕಾರಣ ಕಿಶೋರ್ ವಸತಿ ಶಾಲೆಯಿಂದ ಮನೆಗೆ ಬಂದಿದ್ದ. ನಂತರ ರಜೆ ಮುಗಿದ ಬಳಿಕ ತಂದೆ ಈರೇಗೌಡ ಕಿಶೋರ್‌ನನ್ನು ಆ.8 ರಂದು ಮತ್ತೆ ವಸತಿ ಶಾಲೆಗೆ ಬಿಟ್ಟು ಬಂದಿದ್ದರು. ಇದಾದ ನಂತರ ಮತ್ತೆ ಗೌರಿ-ಗಣೇಶ ಹಬ್ಬಕ್ಕೆ (Ganesha Festoival) ತಾಯಿಗೆ ಎಡೆ ಇಡಲು ಕಿಶೋರ್‌ನನ್ನು ಮನೆಗೆ ಕರೆತರಲು ಹೋದ ವೇಳೆ ಇಲ್ಲಿನ ಶಿಕ್ಷಕರು 20 ದಿನಗಳಿಂದ ನಿಮ್ಮ ಮಗ ಶಾಲೆಗೇ ಬಂದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಕ್ಸ್ ಚಚ್ಚಿ ಅಂಪೈರ್‌ರನ್ನು ಬಡಿದೆಬ್ಬಿಸಿದ ಸ್ಮಿತ್ – ಆಸಿಸ್ ಆಟಗಾರನ ಕ್ರೀಡಾ ಬದ್ಧತೆಗೆ ಮೆಚ್ಚುಗೆ
Advertisement
Advertisement
ಆ.8 ರಂದು ಈರೇಗೌಡ ಕಿಶೋರ್‌ನನ್ನು ಮೊರಾರ್ಜಿ ದೇಸಾಯಿ ಶಾಲೆಗೆ ಬಿಡುವ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ ಕಿಶೋರ್ ಮತ್ತೆ ಶಾಲೆಯಿಂದ ಹೊರ ಬರುವ ದೃಶ್ಯ ಮಾತ್ರ ಇಲ್ಲ. ಇದಲ್ಲದೇ ಕಿಶೋರ್ ಟ್ರಂಕ್ ಹಾಗೂ ಬಟ್ಟೆಗಳು ಹಾಸ್ಟೆಲ್‌ನಲ್ಲೇ ಇವೆ. ಟ್ರಂಕ್ ಬಳಿ ಒಂದು ಲೆಟರ್ ಸಿಕ್ಕಿದ್ದು, ಇದ್ರಲ್ಲಿ ನನಗೆ ಈ ಶಾಲೆಯಲ್ಲಿ ಓದಲು ಇಷ್ಟವಿಲ್ಲ. ಈ ಬಗ್ಗೆ ನಿಮಗೆ ಸಾಕಷ್ಟು ಬಾರಿ ಹೇಳಿದ್ದೇನೆ. ಅಪ್ಪ-ಚಿಕ್ಕಪ್ಪ ನನ್ನ ಹುಡುಕಬೇಡಿ ಎಂದು ಬರೆದಿದೆ. ಆದ್ರೆ ಕಿಶೋರ್ ಪೋಷಕರು ಇದು ನನ್ನ ಮಗನ ಕೈಬರಹವಲ್ಲ ಎಂದು ಹೇಳುತ್ತಿದ್ದಾರೆ. ಇತ್ತ ಪ್ರೀತಿಯಿಂದ ಸಾಕಿದ ಮೊಮ್ಮಗ ಕಾಣೆಯಾಗಿರುವ ಸುದ್ದಿಯನ್ನು ಕೇಳಿ ಅಜ್ಜಿ ಕಣ್ಣೀರು ಹಾಕುತ್ತಿದ್ದಾಳೆ. ಇದನ್ನೂ ಓದಿ: ಕೆರೆ ಮಧ್ಯ ತೆಪ್ಪದಲ್ಲಿ ತೆರಳಿ ಬೆಸ್ಕಾಂ ಸಿಬ್ಬಂದಿಯಿಂದ ವಿದ್ಯುತ್ ದುರಸ್ತಿ – ಎಲ್ಲೆಡೆ ಮೆಚ್ಚುಗೆ
ವಿದ್ಯಾರ್ಥಿಯೊಬ್ಬ ಮೊರಾರ್ಜಿ ದೇಸಾಯಿ ಶಾಲೆಯಿಂದ ಕಾಣೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸಿಸಿಟಿವಿ ದೃಶ್ಯದಲ್ಲಿ ವಿದ್ಯಾರ್ಥಿ ಶಾಲೆಯಿಂದ ಹೊರಗೆ ಹೋಗುವುದು ಸೆರೆಯಾಗಿಲ್ಲ. ಹೀಗಿರುವಾಗ ವಿದ್ಯಾರ್ಥಿ ಎಲ್ಲಿಗೆ ಹೋದ ಎಂಬ ಪ್ರಶ್ನೆಗಳು ಮೂಡುತ್ತಿದೆ. ಈ ಬಗ್ಗೆ ಕಿಶೋರ್ ಪೋಷಕರು ಕೆರಗೊಡು ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಯನ್ನು ಕೇಳಿದ್ರೆ ಈ ಬಗ್ಗೆ ತನಿಖೆ ನಡೆಯುತ್ತಿದೆ. ವಿದ್ಯಾರ್ಥಿಯನ್ನು ಹುಡುಕುತ್ತೇವೆ, ಅಲ್ಲದೇ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಹೇಳಿದ್ದಾರೆ.