ಬೆಂಗಳೂರು: ಬೆಂಗಳೂರಿನ ಶಾಲೆಯೊಂದರಲ್ಲಿ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳ್ಳಂದೂರಿನ ಚೈತನ್ಯ ಟೆಕ್ನಾಲಾಜಿ ಸ್ಕೂಲ್ ನಲ್ಲಿ ನಡೆದಿದೆ.
ಧಾರವಾಡ ಮೂಲದ ಸಾರ್ಥಕ್ ಪುರಾಣಿಕ್ (17) ಸಾವನ್ನಪ್ಪಿದ್ದ ವಿದ್ಯಾರ್ಥಿ. ಕಾಲೇಜಿನ ಟಾಯ್ಲೆಟ್ ನಲ್ಲಿ ಸಾರ್ಥಕ ಶವ ಪತ್ತೆಯಾಗಿದ್ದು, ಇದೇ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದನು.
ಸಾರ್ಥಕ್, ಶ್ರೀಕಾಂತ್ ಪುರಾಣಿಕ್ ಮತ್ತು ಸುಚೇತ್ರ ಅವರ ಪುತ್ರ. ಕಳೆದ 2 ವರ್ಷಗಳಿಂದ ಕಾಲೇಜಿನ ಹಾಸ್ಟೆಲ್‍ನಲ್ಲಿ ಉಳಿದುಕೊಂಡಿದ್ದ. ಶೌಚಾಲಯಕ್ಕೆ ತೆರಳಿದ್ದಾಗ ಸಾವನ್ನಪ್ಪಿದ್ದಾನೆ. ಶೌಚಾಲಯಕ್ಕೆ ತೆರಳಿ ಸಾಕಷ್ಟು ಸಮಯ ಕಳೆದರು ಹೊರ ಸಾರ್ಥಕ್ ಹೊರ ಬರಲಿಲ್ಲ. ಅನುಮಾನಗೊಂಡು ಕಾಲೇಜಿನ ವಿದ್ಯಾರ್ಥಿಗಳು ಟಾಯ್ಲೆಟ್ ಬಳಿ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ.
ಕಾಲೇಜು ಸಿಬ್ಬಂದಿ ಕೂಡಲೇ ಸಾರ್ಥಕ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಕೆಲವು ಗಂಟೆಗಳ ಮೊದಲೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಘಟನೆಯ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.